shimoga job news | ಶಿವಮೊಗ್ಗ : ಉದ್ಯೋಗಾವಕಾಶ – ಮೇ 27 ರಂದು ಖಾಸಗಿ ಕಂಪನಿಗಳಿಂದ ಸಂದರ್ಶನ

Shivamogga : Job Opportunity – Interviews by Private Companies on May 27

ಶಿವಮೊಗ್ಗ (shivamogga), ಮೇ 22 : ಶಿವಮೊಗ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿವತಿಯಿಂದ ಮೇ 27 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಗಳಾದ ಶ್ರೀಲಕ್ಷ್ಮೀ ಗ್ರೂಪ್ಸ್ , ಹೆಚ್.ಡಿ.ಎಫ್.ಸಿ. ಬ್ಯಾಂಕ್, ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಎಲ್ & ಟಿ ಫೈನಾನ್ಸ್, ರೇಜ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಸಂಸ್ಥೆಗಳು ಭಾಗವಹಿಸಲಿವೆ. ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಯಾವುದೇ ಪದವಿ ಪೂರೈಸಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಸಂದರ್ಶನಕ್ಕೆ ಆಗಮಿಸುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಶಿವಮೊಗ್ಗ ನಗರದ ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿಯ ಪಂಪಾ ನಗರ 2 ನೇ ಕ್ರಾಸ್ ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

Shivamogga : Job Opportunity – Interviews by Private Companies on May 27

Shivamogga, May 22: The District Employment Exchange Office in Shivamogga city has organized a direct interview for job seekers on May 27 at 10:00 AM.

Prestigious private companies such as Srilakshmi Groups, HDFC Bank, Samruddhi Credit Co-operative Society, L&T Finance, and Rage Management Solutions will participate in the interview. Candidates will be selected directly for vacant positions through this process.

Applicants who have completed SSLC, PUC, ITI, Diploma, or any degree, and are between 18 to 35 years of age, are eligible to attend.

Candidates should bring their biodata and Aadhaar card copies to the District Employment Exchange Office, located at 2nd Cross, Pampa Nagar, Gutyappa Colony, Sagar Road, Shivamogga city.

Entry to the direct interview is free of charge. For more information, contact: 9380663606 / 9108235132.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *