ಶಿವಮೊಗ್ಗ : ಜೂನ್ 3 ರಂದು ನಗರ, ಜೂ. 6 ರಂದು ಗ್ರಾಮೀಣ ಭಾಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

Shivamogga: Power outage in various parts of the city on June 3rd and rural areas on June 6th.

ಶಿವಮೊಗ್ಗ ನಗರದ ವಿವಿಧೆಡೆ ಜೂನ್ 3 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಜೂನ್ 02 : ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-5ರ ವ್ಯಾಪ್ತಿಯ ಬಿ.ಹೆಚ್.ರಸ್ತೆಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜೂ. 03 ರಂದು ಬೆಳಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆವರೆಗೆ ಈ ಕೆಳಕಂಡ ಬಡಾವಣೆಗಳಲ್ಲಿ ವಿದ್ಯುತ್ ವ್ಯಯತ್ಯಯವಾಗಲಿದೆ.

ವಿವರ : ಭಾರತಿ ಕಾಲೋನಿ, ಪಂಚವಟಿ ಕಾಲೋನಿ, ಬಿ.ಹೆಚ್.ರಸ್ತೆ, ಎನ್.ಟಿ.ರಸ್ತೆ, ಜೆ.ಸಿ.ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ : ಜೂನ್ 6 ರಂದು ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಜೂನ್ 02 : ಮೆಸ್ಕಾಂ ವ್ಯಾಪ್ತಿಯ ಶಿವಮೊಗ್ಗದ ಎಂ.ಆರ್.ಎಸ್ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವ  ಹಿನ್ನೆಲೆಯಲ್ಲಿ ಜೂನ್ 6 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಎಫ್‌-7 ಪಿಳ್ಳಂಗಿರಿ ಎನ್.ಜೆ.ವೈ ಮತ್ತು ಎಫ್‌-8 ಜಾವಳ್ಳಿ ಐ ಪಿ ಮಾರ್ಗಗಳಲ್ಲಿ‌ವಬರುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿವರ : ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೇನವಳ್ಳಿ, ಹಾರೋಬೇನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ,

ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಕೋರಿದೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *