shimoga news | ಶಿವಮೊಗ್ಗ : ಉದ್ಯೋಗಾವಕಾಶ – ಜೂನ್ 16 ರಂದು ನೇರ ಸಂದರ್ಶನ

job news

ಶಿವಮೊಗ್ಗ (shivamogga), ಜೂನ್ 12 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನದಲ್ಲಿ ರಾಹುಲ್ ಕಾರ‍್ಸ್ ಪ್ರೈ.ಲಿ., (ಹೊಂಡಾಯಿ) ಕಂಪನಿಯು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

ಪಿಯುಸಿ, ಐಟಿಐ, ಬಿಇ ಮತ್ತು ಯಾವುದೇ ಪದವಿ ಪೂರೈಸಿದ, 18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *