Shimoga news | ಶಿವಮೊಗ್ಗ : ರೌಡಿ ಶೀಟರ್ ಕೊ**ಲೆ ಪ್ರಕರಣದ ಆರೋಪಿಗಳ ಪತ್ತೆಗೆ ಮೂರು ಪೊಲೀಸ್ ತಂಡಗಳ ರಚನೆ

Shimoga news | Shivamogga: Three police teams formed to find the accused ಶಿವಮೊಗ್ಗ : ರೌಡಿ ಶೀಟರ್ ಕೊ**ಲೆ ಪ್ರಕರಣದ ಆರೋಪಿಗಳ ಪತ್ತೆಗೆ ಮೂರು ಪೊಲೀಸ್ ತಂಡಗಳ ರಚನೆ

ಶಿವಮೊಗ್ಗ (shivamogga), ಜೂನ್ 13: ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾದಲ್ಲಿ ಜೂನ್ 12 ರಂದು ಹಾಡಹಗಲೇ ನಡೆದ ರೌಡಿ ಶೀಟರ್ ನರಸಿಂಹ (42) ಕೊ**ಲೆ ಪ್ರಕರಣದ ಆರೋಪಿಗಳ ಪತ್ತೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.

ಈ ಕುರಿತಂತೆ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಸೀಗೆಹಟ್ಟಿ ಬಡಾವಣೆ ಬಡಾವಣೆ ನಿವಾಸಿಯಾದ ಆರೋಪಿ ಅನಿಲ್ ಯಾನೆ ಅಂಬು ಎಂಬಾತ ತನ್ನ ಸಹಚರರೊಂದಿಗೆ ಸೇರಿಕೊಂಡು, ಹಳೇಯ ವೈಷಮ್ಯದ ಹಿನ್ನೆಲೆಯಲ್ಲಿ ಜೂನ್ 12 ರ ಸಂಜೆ 4.30 ರಿಂದ 4.45 ರ ನಡುವೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ನರಸಿಂಹನ ಹತ್ಯೆ ಮಾಡಿದ್ದಾರೆ.

ಈ ಕುರಿತಂತೆ ಕೋಟೆ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಮೂರು ಪೊಲೀಸ್ ತಂಡಗಳ ರಚನೆ ಮಾಡಲಾಗಿದೆ. ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *