shimoga news | ಶಿವಮೊಗ್ಗ : ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಜೂನ್ 14 ರಂದು  ಸಿಇಟಿ/ಕಾಮೆಡ್-ಕೆ ಸಂವಾದ

Model Work of Young Officers: Free CET - NEET Training Program for Government College Students of Shimoga District! ಯುವ ಅಧಿಕಾರಿಗಳ ಮಾದರಿ ಕಾರ್ಯ : ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ - ನೀಟ್ ತರಬೇತಿ ಕಾರ್ಯಕ್ರಮ!

ಶಿವಮೊಗ್ಗ (shivamogga), june 13: ನಗರದ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 14ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಎಂ.ಬಿ.ಎ.–ಎಂ.ಸಿ.ಎ. ಸಭಾಂಗಣದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯ ನೇರ ಪ್ರಾತ್ಯಕ್ಷಿಕೆ ನಡೆಯಲಿದ್ದು, ವಿವಿಧ ಇಂಜಿನಿಯರಿಂಗ್ ವಿಭಾಗಗಳ ಪರಿಚಯ, ಉದ್ಯೋಗಾವಕಾಶಗಳು, ವಿದ್ಯಾರ್ಥಿವೇತನಗಳು ಹಾಗೂ ಬ್ಯಾಂಕ್‌ಗಳಲ್ಲಿ ಲಭ್ಯವಿರುವ ಶಿಕ್ಷಣ ಸಾಲದ ಸೌಲಭ್ಯಗಳ ಕುರಿತು ತಜ್ಞರು ಸಮಗ್ರ ಮಾಹಿತಿ ನೀಡಲಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಕಾರ್ಯಕ್ರಮಕ್ಕೆ ಭಾಗವಹಿಸಲು ಅನುಕೂಲವಾಗುವಂತೆ, ಮಹಾವೀರ ಸರ್ಕಲ್ ಹಾಗೂ ಬಸ್ ನಿಲ್ದಾಣದಿಂದ ಜೆ.ಎನ್.ಎನ್.ಸಿ.ಇ. ಕಾಲೇಜಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 96324 71667 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *