student bus pass news | ವಿದ್ಯಾರ್ಥಿಗಳಿಗೆ ಉಚಿತ/ರಿಯಾಯಿತಿ ಬಸ್ ಪಾಸ್ ವಿತರಣೆ ಆರಂಭ

KSRTC Student bus pass application invinted news / shimoga

ಶಿವಮೊಗ್ಗ (shivamogga), ಜೂನ್ 16 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಮೇ ತಿಂಗಳಿನಿಂದ ಆರಂಭಿಸಿದ್ದು, ಸರ್ಕಾರದ ಆದೇಶದಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಜೂ. 12 ರಿಂದ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದೆ.

ಉಚಿತ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು URL-https://sevasindhu.karnataka.gov.in/buspassservices ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ವಿದ್ಯಾರ್ಥಿ ಬಸ್‌ಪಾಸ್ ವಿತರಣೆಯಲ್ಲಿ ಹಾಲಿ ಅನುಸರಿಸುತ್ತಿರುವ ನಿಯಮಾವಳಿಗಳನ್ನು ಮುಂದುವರೆಸಲಾಗಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ವಿತರಿಸಲಾಗಿರುವ ವಿದ್ಯಾರ್ಥಿ ಬಸ್‌ಪಾಸ್‌ಗಳು ಯಥಾವತ್ತಾಗಿ ಚಾಲ್ತಿಯಲ್ಲಿರುತ್ತವೆ. ಆದಾಗ್ಯು ವಿದ್ಯಾರ್ಥಿಗಳು ಪಾವತಿಸಿರುವ ಮೊತ್ತವನ್ನು ಹಿಂದಿರುಗಿಸಲಾಗುವುದು.

ರಾಜ್ಯ ವಾಸವಿದ್ದು, ನೆರೆ ರಾಜ್ಯಗಳಲ್ಲಿ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ನೆರೆ ರಾಜ್ಯಗಳಲ್ಲಿ (ರಾಜ್ಯದ ಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್ ಪಡೆಯಬಹುದಾಗಿದೆ.

ಈಗಾಗಲೇ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಪಡೆದು ವಿತರಿಸಲಾದ ಪಾಸ್‌ಗಳ ಸಂಪೂರ್ಣ ಶುಲ್ಕವನ್ನು 15 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರುಪಾವತಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://ksrtc.karnataka.gov.in / student passನಲ್ಲಿ ಒದಗಿಸಲಾಗಿದೆ.

Free/Discounted Bus Pass Distribution for Students Begins

Shivamogga, June 16: The Karnataka State Road Transport Corporation (KSRTC) has started distributing free/discounted bus passes for students for the academic year 2026–27 from May. As per government orders, from June 12 onwards, free bus passes are being issued to all students studying in schools and colleges across the state who travel by KSRTC buses.

To obtain a free bus pass, students must apply through the Seva Sindhu portal at https://sevasindhu.karnataka.gov.in/buspassservices. The existing rules for student bus pass distribution will continue, and passes already issued for the current academic year will remain valid. However, the amount already paid by students will be refunded.

Students residing in Karnataka but studying in neighboring states, as well as those living in border areas of neighboring states but studying in institutions within Karnataka, are also eligible for free bus passes.

The full fee collected for passes already issued in the current academic year will be refunded to students within 15 days, according to a press release by divisional controllers. Details of bus pass distribution counters are available for students on the KSRTC website at https://ksrtc.karnataka.gov.in/studentpass (ksrtc.karnataka.gov.in in Bing).

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *