ಶಿವಮೊಗ್ಗ (shivamogga), ಜೂನ್ 23: ಶಿವಮೊಗ್ಗ ನಗರದ ತಾಲೂಕು ಕಚೇರಿಗೆ ಜೂನ್ 24 ರಂದು ಲೋಕಾಯುಕ್ತ ಪೊಲೀಸರು ದಿಡೀರ್ ಭೇಟಿಯಿತ್ತು ಪರಿಶೀಲನೆ ನಡೆಸಿದ ಘಟನೆ ನಡೆದಿದೆ.
ತಹಶೀಲ್ದಾರ್ ಕಚೇರಿ, ರೆಕಾರ್ಡ್ ರೂಂ ಹಾಗೂ ಆರ್’ಐ ಕಚೇರಿಯ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ತಂಡಗಳು ದಾಳಿ ನಡೆಸಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ಸದರಿ ದಾಳಿ ನಡೆದಿದೆ. ಸುಮಾರು 15 ಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿ – ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಲೋಕಾಯುಕ್ತ ದಾಳಿಯು ತಾಲೂಕು ಕಚೇರಿ ಆಡಳಿತ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ನಾನಾ ರೀತಿಯ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.
ದಾಳಿಯ ಕುರಿತಂತೆ ಲೋಕಾಯುಕ್ತ ಕಚೇರಿಯಿಂದ ಇಲ್ಲಿಯವರೆಗೂ ಯಾವುದೇ ಅದಿಕೃತ ಮಾಹಿತಿ ಹೊರಬಿದ್ದಿಲ್ಲ. ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.
ಭಾರೀ ಗೋಲ್ಮಾಲ್ : ಭೂ ಸುರಕ್ಷಾ ತಂತ್ರಾಂಶದಲ್ಲಿ ಶಿವಮೊಗ್ಗ ತಾಲೂಕಿನ ಕೆಲ ಜಮೀನಿಗಳಿಗೆ ಸಂಬಂಧಿಸಿದಂತೆ ನಕಲಿ ಭೂ ದಾಖಲೆಗಳನ್ನು ಅಪ್’ಲೋಡ್ ಮಾಡುವ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿತ್ತು. ಈ ಸಂಬಂಧ ಇತ್ತೀಚೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸದರಿ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.
Shivamogga, June 23: An incident occurred when the Lokayukta police made a surprise visit to the taluk office of Shivamogga city on June 24 and conducted an inspection.

