shimoga news | ಶಿವಮೊಗ್ಗ : ಉದ್ಯೋಗಾವಕಾಶ – ಜೂನ್ 30 ರಂದು ನೇರ ಸಂದರ್ಶನ

job news

ಶಿವಮೊಗ್ಗ (shivamogga), ಜೂನ್ 24 : ಶಿವಮೊಗ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 30 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಸಂದರ್ಶನದಲ್ಲಿ ಸ್ವಮಾನ್ ಫೈನಾನ್ಸ್ ಪ್ರೈ.ಲಿ., ಐಬ್ಲೂ ಮ್ಯಾನ್‌ಪವರ್ ಸೆಕ್ಯೂರ್ ಸಲ್ಯೂಷನ್ಸ್ ಎಲ್‌ಎಲ್‌ಪಿ ಸಂಸ್ಥೆಗಳು ಭಾಗವಹಿಸಲಿವೆ. ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಡಿಗ್ರಿ ಪೂರೈಸಿದ, 18 ರಿಂದ 40 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

Shivamogga : Job Opportunities – Direct Interview on June 30

Shivamogga, June 24: A direct interview has been conducted for job seekers at the District Employment Exchange Office in Shivamogga city on June 30 at 10 am.

Swaman Finance Pvt. Ltd., iBlue Manpower Secure Solutions LLP will participate in the interview. Candidates will be selected for the vacant posts through direct interview.

Male candidates between the ages of 18 to 40 who have completed SSLC, PUC, ITI, Diploma and any degree will participate

Those who are interested will be informed in the announcement of the employment officer to appear for the interview at the District Employment Exchange Office, Guthyappa Colony, Pampa Nagar 2nd Cross, Sagar Road, Shivamogga. Admission to the direct interview is free. For more information, contact mobile number 9380663606/ 9108235132.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *