ಶಿವಮೊಗ್ಗ (shivamogga), ಜೂನ್ 25: ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು, ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡದ ಚಾನಲ್ ಏರಿ ರಸ್ತೆಯ ಲೇಔಟ್ ವೊಂದರ ಸಮೀಪ ನಡೆದಿದೆ.
ಅಜರುದ್ದೀನ್ ಯಾನೆ ಅಜರ್ (26) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ 1.50 ಲಕ್ಷ ರೂ. ಮೌಲ್ಯದ 15 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಹಾಗೂ 1600 ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಖಚಿತ ವರ್ತಮಾನದ ಮೇರೆಗೆ ಇನ್ಸ್’ಪೆಕ್ಟರ್ ರಾಘವೇಂದ್ರ ಕಾಂಡಿಕೆ ಅವರು, ತಮ್ಮ ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ವಿರುದ್ದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
shimoga news | MDMA drug sale in Ragigudda Shimoga: One arrested

