shimoga job news | ಶಿವಮೊಗ್ಗ : ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ – ಜುಲೈ 07 ರಂದು ನೇರ ಸಂದರ್ಶನ

job news

ಶಿವಮೊಗ್ಗ (shivamogga), ಜುಲೈ 04 : ಶಿವಮೊಗ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿವತಿಯಿಂದ ಜುಲೈ 07 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನದಲ್ಲಿ ಆದಿತ್ಯ ಬಿರ್ಲಾ ಕ್ಯಾಪಿಟಲ್ ಪ್ರೈ.ಲಿ., ಇಂಡಸ್ ಸಂಡ್ ಬ್ಯಾಂಕ್ ಪ್ರೈ.ಲಿ., ಭಾಗವಹಿಸಲಿವೆ. ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಡಿಗ್ರಿ ಪೂರೈಸಿದ, 18 ರಿಂದ 35 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ  ಶಿವಮೊಗ್ಗದ ಸಾಗರ ರಸ್ತೆಯ ಪಂಪಾ ನಗರ 2 ನೇ ಕ್ರಾಸ್ ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜುಲೈ 04 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *