ಹೊಸನಗರ (hosanagara), ಜುಲೈ 06: ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಹೊಸನಗರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ 06/07/2026 ರಂದು ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ.
ಈ ಕುರಿತಂತೆ ತಹಶೀಲ್ದಾರ್ ಭರತ್ ರಾಜ್ ಅವರು ಆದೇಶ ಹೊರಡಿಸಿದ್ದಾರೆ. ರಜೆ ಆದೇಶವು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಪದವಿ ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ಹೊಸನಗರ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ 06/07/2026 ರಂದು ಹೊಸನಗರ ತಾಲೂಕು ಆಡಳಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

