ವಿಧಾನಸಭೆ ಚುನಾವಣೆ : ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಮತ ಎಣಿಕೆ!

ಶಿವಮೊಗ್ಗ, ಮೇ.11: ‘ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಶಿವಮೊಗ್ಗ, ಮೇ.12: ‘ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಅಂಚೆ ಮತ ಎಣಿಕೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ಹೆಚ್ಚುವರಿಯಾಗಿ 6 ಮಂದಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರು ಶನಿವಾರ ಬೆಳಿಗ್ಗೆ 7ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ಸೂಚನೆ ನೀಡಲಾಗಿದೆ.

ಬೆಳಿಗ್ಗೆ 7ಗಂಟೆಗೆ ಭದ್ರತಾ ಕೊಠಡಿಯ ಬಾಗಿಲನ್ನು ತೆರೆಯಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್‌ಗಳು ಮತ್ತು ಸಹಾಯಕ ಚುನಾವಣಾಧಿಕಾರಿಯ ಟ್ಯಾಬುಲೇಷನ್ ಟೇಬಲ್ ಇರುತ್ತದೆ. ಮತ ಎಣಿಕೆ ಸ್ಥಳದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟರಿಗೆ ಹಾಗೂ ಮತ ಎಣಿಕೆ ಏಜೆಂಟರು ಪ್ರವೇಶಿಸಲು ಅವಕಾಶವಿರುವುದು.

ಅಂಚೆ ಮತಪತ್ರಗಳ ಎಣಿಕೆ ಮತ್ತು ಕಂಟ್ರೋಲ್ ಯುನಿಟ್ ಮೂಲಕ ಮತ ಎಣಿಕೆಯನ್ನು ಬೆಳಿಗ್ಗೆ 8ಗಂಟೆಗೆ ಆರಂಭಿಸಲಾಗುವುದು. ಪ್ರತಿ ಮತ ಎಣಿಕೆ ಟೇಬಲ್‌ಗೆ ಒಬ್ಬ ಮೇಲ್ವಿಚಾರಕ, ಒಬ್ಬ ಸಹಾಯಕ ಮತ್ತು ಒಬ್ಬ ಮೈಕ್ರೋ ಅಬ್ಸರ್ವರ್ ನೇಮಕ ಮಾಡಿ ತರಬೇತಿ ನೀಡಲಾಗಿದೆ.

ಇವಿಎಂ ಮತ ಎಣಿಕೆ ಪೂರ್ಣಗೊಂಡ ಬಳಿಕ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಐದು ವಿವಿಪ್ಯಾಟ್‌ಗಳನ್ನು ಆಯ್ಕೆ ಮಾಡಿ ಎಣಿಕೆ ಮಾಡಲಾಗುವುದು. ಮತ ಎಣಿಕೆ ಹಾಲ್‌ನಲ್ಲಿ ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿರ್ಬಂಧಿಸಲಾಗಿದೆ. ಮತ ಎಣಿಕೆ ಆವರಣದ ಸುತ್ತ ಸೆಕ್ಷನ್ 144 ಜಾರಿಗಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ ಎಣಿಕೆ ಸುತ್ತು ವಿವರ: ಶಿವಮೊಗ್ಗ ಗ್ರಾಮೀಣ ಕ್ಷೇತ್ರದಲ್ಲಿ 247 ಮತಗಟ್ಟೆಗಳಿದ್ದು 18 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಇದೇ ರೀತಿ ಭದ್ರವಾತಿ 253 ಮತಗಟ್ಟೆ 19 ಸುತ್ತು, ಶಿವಮೊಗ್ಗ 284 ಮತಗಟ್ಟೆ 21 ಸುತ್ತು, ತೀರ್ಥಹಳ್ಳಿ 258 ಮತಗಟ್ಟೆ 19 ಸುತ್ತು, ಶಿಕಾರಿಪುರ 234 ಮತಗಟ್ಟೆ 17 ಸುತ್ತು, ಸೊರಬ 239 ಮತಗಟ್ಟೆ 18 ಸುತ್ತು ಹಾಗೂ ಸಾಗರದಲ್ಲಿ 267 ಮತಗಟ್ಟೆಗಳಿದ್ದು, 20 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಭಿನಂದನೆ

ಶಿವಮೊಗ್ಗ ಜಿಲ್ಲೆಯಲ್ಲಿ ಮತದಾನ ಸಂಪೂರ್ಣ ಶಾಂತಿಯುತವಾಗಿ ನಡೆದಿದ್ದು ಯಾವುದೇ ಅಹಿತಕರ ಘಟನೆಗಳು ನಡೆದಿರುವುದಿಲ್ಲ. ಜಿಲ್ಲೆಯಲ್ಲಿ ಒಟ್ಟು 1782 ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, 8100 ಸಿಬ್ಬಂದಿಗಳು ಚುನಾವಣಾ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮತದಾನ ಸಂಪೂರ್ಣ ಶಾಂತಿಯುತವಾಗಿ ನಡೆದಿದ್ದು ಯಾವುದೇ ಅಹಿತಕರ ಘಟನೆಗಳು ನಡೆದಿರುವುದಿಲ್ಲ. ಜಿಲ್ಲೆಯಲ್ಲಿ ಒಟ್ಟು 1782 ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, 8100 ಸಿಬ್ಬಂದಿಗಳು ಚುನಾವಣಾ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ ಎಲ್ಲಾ ಮತದಾರರಿಗೆ ಹಾಗೂ ಸುಗಮವಾಗಿ ಮತದಾನ ಆಯೋಜಿಸಲು ಸಹಕರಿಸಿದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *