ವಿಧಾನಸಭೆ ಚುನಾವಣೆ ಮತ ಎಣಿಕೆ : ಮೇ 13 ರಂದು ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು, ಮೇ 13 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 13 ರಂದು ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ವಿವರ: ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲ ವಾಹನಗಳ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ. ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ವರೆಗೆ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಶಿವಮೊಗ್ಗ, ಮೇ 12: ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು, ಮೇ 13 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 13 ರಂದು ನಗರದ ವಿವಿಧೆಡೆ  ವಾಹನಗಳ ಸಂಚಾರ ಮಾರ್ಗ ಬದಲಾವಣೆಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ವಿವರ: ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲ ವಾಹನಗಳ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ. ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ವರೆಗೆ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರು, ಭದ್ರಾವತಿ, ಎನ್.ಆರ್ ಪುರ ಕಡೆಯಿಂದ ಬರುವ ಭಾರೀ ವಾಹನ, ಬಸ್, ಕಾರು, ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಸಂಚರಿಸಬೇಕು.

ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲ ಭಾರೀ ವಾಹನ ಮತ್ತು

ಬಸ್ ಗಳು ಬಿ.ಹೆಚ್ ರಸ್ತೆ ಮೂಲಕ ಹಾಗೂ ಹೊನ್ನಾಳಿ ದಾವಣಗೆರೆಯಿಂದ ಬರುವ ವಾಹನಗಳು ವಿನೋಬನಗರ 100 ಅಡಿ ರಸ್ತೆ ಮಾರ್ಗವಾಗಿ ಸಂಚರಿಸಲು ಸೂಚಿಸಲಾಗಿದೆ.  

ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ ಹರಿಹರ, ದಾವಣಗೆರೆಗೆ ಹೋಗುವ ಬಸ್ ಗಳು ಎ.ಎ ಸರ್ಕಲ್, ಗೋಪಿ ಸರ್ಕಲ್, ಮಹಾವೀರ ಸರ್ಕಲ್, ಕೆಇಬಿ ಸರ್ಕಲ್ ಮುಖಾಂತರವಾಗಿ ಸಂಚರಿಸಬೇಕು.

ಕೆಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ ದಿಂದ ಬೆಂಗಳೂರು ಭದ್ರಾವತಿ ಎನ್.ಆರ್. ಪುರ ಕಡೆಗೆ ಹೋಗುವ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗಬೇಕು.

ಏಜೆಂಟರು ಮತ್ತು ಎಲ್ಲ ಇಲಾಖೆಯ ಅಧಿಕಾರಿಗಳ ವಾಹನಗಳನ್ನು ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು, ವಜ್ರ ಮಹೋತ್ಸವ ಕಟ್ಟಡದ ಎದುರು ಮತ್ತು ಬಿ.ಹೆಚ್. ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು.

ಸಾರ್ವಜನಿಕರ ಕಾರುಗಳು ಮತ್ತು ದ್ವಿ ಚಕ್ರ ವಾಹನಗಳನ್ನು ಮಾತ್ರ ಎಂ.ಆರ್.ಎಸ್ ನಿಂದ ಎನ್.ಆರ್ ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್ ಗೆ ಅವಕಾಶ ಕಲ್ಪಿಸಲಾಗಿದೆ.

ಎಲ್ಲ ತರದ ವಾಹನಗಳನ್ನುಎಂ.ಆರ್.ಎಸ್. ಸರ್ಕಲ್ ನ ಹತ್ತಿರವಿರುವ ಕೆ.ಇ.ಬಿ ಸಮುದಾಯ ಭವನದ ಹಿಂಭಾಗ ಮತ್ತು ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ಟೇಡಿಯಂ ಹತ್ತಿರ ಪಾರ್ಕಿಂಗ್ ಮಾಡಬೇಕು ಎಂದು ಪ್ರಕಟಣೆಯಲ್ಲಿ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಮೊಬೈಲ್ ಫೋನ್, ಎಲೆಕ್ಟ್ರಾನಿಕ್ಸ್ ವಾಚ್ ನಿರ್ಬಂಧ

*** ಮತ ಎಣಿಕಾ ಕೇಂದ್ರದ ಒಳಗಡೆ ಮೊಬೈಲ್ ಫೋನ್‌, ಡಿಜಿಟಲ್‌ ವಾಚ್‌ ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣ ಕೊಂಡೊಯ್ಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮತ ಎಣಿಕಾ ಕೇಂದ್ರಕ್ಕೆ  ಬರುವ ಚುನಾವಣಾ ಏಜೆಂಟರ್ ಗಳು ಮತ್ತು ಇತರೆ ವ್ಯಕ್ತಿಗಳು  ಮೊಬೈಲ್ ಫೋನ್, ಡಿಜಿಟಲ್‌ ವಾಚ್‌  ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಯಾವುದೇ ಕಾರಣಕ್ಕೂ ತರುವಂತಿಲ್ಲ ಎಂದು ಪೊಲೀಸ್ ಇಲಾಖೆಯು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *