ಶಿವಮೊಗ್ಗ (shivamogga), ಜುಲೈ 14: ಮಹಿಳೆಯೋರ್ವರ ಮಾಂಗಲ್ಯ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗ ಜಿಲ್ಲೆ ಹೊಸನಗರ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾದ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಹೆಡೂರು ಗ್ರಾಮದ ನಿವಾಸಿ ಮಹಮ್ಮದ್ ತೌಸಿಫ್ (38) ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಆಮಲಗೂರು ನಿವಾಸಿ ಬೋನಿಫಲ್ ರೋಷನ್ ಕುನ್ನಿ (44) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ 1,80,000 ರೂ. ಮೌಲ್ಯದ ಸುಮಾರು 12 ಗ್ರಾಂ ತೂಕದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಯಮಹಾ ಸುಜುಕಿ ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣದ ಹಿನ್ನೆಲೆ : ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೊನಲೆ ಗ್ರಾಮದ ನಿವಾಸಿ ಗಾಯತ್ರಿ ಎಂಬುವರು,14-07-2026 ರಂದು ಬೆಳಿಗ್ಗೆ ಸರಿಸುಮಾರು 6.30 ಗಂಟೆಗೆ ತಮ್ಮ ಹೋಟೆಲ್ ಮುಂಭಾಗದಲ್ಲಿ ಕಸ ಗುಡಿಸುತ್ತಿದ್ದರು.
ಈ ವೇಳೆ ಸುಜುಕಿ ಬೈಕ್ ನಲ್ಲಿ ಆಗಮಿಸಿದ ಆರೋಪಿಗಳು, ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು. ಈ ಕುರಿತಂತೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
Necklace theft in Sonale village of Hosanagar: Police launch swift operation – two arrested! | Shivamogga, July 14: In connection with the theft of a woman’s necklace, the Hosanagar police station in Shivamogga district conducted a swift operation and succeeded in arresting two accused.

