ಸೊರಬ : ಭಾರೀ ಮತಗಳ ಅಂತರದಲ್ಲಿ ಜಯ ಸಾಧಿಸಿದ ಮಧು ಬಂಗಾರಪ್ಪ!

ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಿಬ್ಬರ ಸ್ಪರ್ಧೆಯಿಂದ ಗಮನ ಸೆಳೆದಿದ್ದ, ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಭಾರೀ ಮತಗಳ ಅಂತರದಲ್ಲಿ ವಿಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಪರಾಭವಗೊಂಡಿದ್ದು, ತೀವ್ರ ಮುಖಭಂಗಕ್ಕೀಡಾಗಿದ್ದಾರೆ! ಮಧು ಬಂಗಾರಪ್ಪ ಅವರು 98,232 ಮತ ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕುಮಾರ್ ಬಂಗಾರಪ್ಪ ಅವರು 54,311 ಮತ ಪಡೆಯಲಷ್ಟೆ ಶಕ್ತರಾಗಿದ್ದಾರೆ. ಮಧು ಬಂಗಾರಪ್ಪ ಅವರು 43,921 ಮತಗಳ ಅಂತರದಲ್ಲಿ ಕುಮಾರ್ ಬಂಗಾರಪ್ಪರನ್ನು ಮಣಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ ಅವರು 6428 ಮತ ಪಡೆದಿದ್ದಾರೆ. ಅಖಾಡದಲ್ಲಿದ್ದ ಉಳಿದ ಅಭ್ಯರ್ಥಿಗಳ ಮತ ಗಳಿಕೆ ಪ್ರಮಾಣ ಸಾವಿರದ ಗಡಿ ದಾಟಿಲ್ಲ.

-ಬಿ.ರೇಣುಕೇಶ್

ಸೊರಬ, ಮೇ 13: ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಿಬ್ಬರ ಸ್ಪರ್ಧೆಯಿಂದ ಗಮನ ಸೆಳೆದಿದ್ದ, ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಭಾರೀ ಮತಗಳ ಅಂತರದಲ್ಲಿ ವಿಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಪರಾಭವಗೊಂಡಿದ್ದು, ತೀವ್ರ ಮುಖಭಂಗಕ್ಕೀಡಾಗಿದ್ದಾರೆ!

ಮಧು ಬಂಗಾರಪ್ಪ ಅವರು 98,232 ಮತ ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕುಮಾರ್ ಬಂಗಾರಪ್ಪ ಅವರು 54,311 ಮತ ಪಡೆಯಲಷ್ಟೆ ಶಕ್ತರಾಗಿದ್ದಾರೆ. ಮಧು ಬಂಗಾರಪ್ಪ ಅವರು 43,921 ಮತಗಳ ಅಂತರದಲ್ಲಿ ಕುಮಾರ್ ಬಂಗಾರಪ್ಪರನ್ನು ಮಣಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ ಅವರು 6428 ಮತ ಪಡೆದಿದ್ದಾರೆ. ಅಖಾಡದಲ್ಲಿದ್ದ ಉಳಿದ ಅಭ್ಯರ್ಥಿಗಳ ಮತ ಗಳಿಕೆ ಪ್ರಮಾಣ ಸಾವಿರದ ಗಡಿ ದಾಟಿಲ್ಲ.

ಒಟ್ಟಾರೆ ಸೊರಬ ಕ್ಷೇತ್ರದ ಮತ ಎಣಿಕೆ ಕಾರ್ಯವು18 ಸುತ್ತುಗಳಲ್ಲಿ ನಡೆಯಿತು. ಮೊದಲ ಸುತ್ತಿನಿಂದ ಕೊನೆಯ ಸುತ್ತಿನವರೆಗೆ ಮಧು ಬಂಗಾರಪ್ಪರವರು ಮುನ್ನಡೆ ಕಾಯ್ದುಕೊಂಡು ಬಂದಿದ್ದು ವಿಶೇಷವಾಗಿತ್ತು.

ಭಿನ್ನಮತ: ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಅವರ ಪರಾಭವಕ್ಕೆ ಸ್ವಪಕ್ಷೀಯ ಮುಖಂಡರ ಭಿನ್ನಮತ ಮುಖ್ಯ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಕುಮಾರ್ ಬಂಗಾರಪ್ಪ ವಿರುದ್ದ ಬಿಜೆಪಿ ಪಕ್ಷದ ಮೂಲ ಕಾರ್ಯಕರ್ತರು ಹಾಗೂ ಮುಖಂಡರು ಮುನಿಸಿಕೊಂಡಿದ್ದರು. ಅವರಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದರು. ಇದು ಕುಮಾರ್ ಮತಗಳಿಕೆಯ ಮೇಲೆ ಪರಿಣಾಮ ಬೀರುವಂತಾಗಿದೆ.

ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಿಬ್ಬರ ಸ್ಪರ್ಧೆಯಿಂದ ಗಮನ ಸೆಳೆದಿದ್ದ, ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಭಾರೀ ಮತಗಳ ಅಂತರದಲ್ಲಿ ವಿಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಪರಾಭವಗೊಂಡಿದ್ದು, ತೀವ್ರ ಮುಖಭಂಗಕ್ಕೀಡಾಗಿದ್ದಾರೆ!
ಮಧು ಬಂಗಾರಪ್ಪ ಅವರು 98,232 ಮತ ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕುಮಾರ್ ಬಂಗಾರಪ್ಪ ಅವರು 54,311 ಮತ ಪಡೆಯಲಷ್ಟೆ ಶಕ್ತರಾಗಿದ್ದಾರೆ. ಮಧು ಬಂಗಾರಪ್ಪ ಅವರು 43,921 ಮತಗಳ ಅಂತರದಲ್ಲಿ ಕುಮಾರ್ ಬಂಗಾರಪ್ಪರನ್ನು ಮಣಿಸಿದ್ದಾರೆ. 
ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ ಅವರು 6428 ಮತ ಪಡೆದಿದ್ದಾರೆ. ಅಖಾಡದಲ್ಲಿದ್ದ ಉಳಿದ ಅಭ್ಯರ್ಥಿಗಳ ಮತ ಗಳಿಕೆ ಪ್ರಮಾಣ ಸಾವಿರದ ಗಡಿ ದಾಟಿಲ್ಲ.

ಹಾಗೆಯೇ ಮಧು ಬಂಗಾರಪ್ಪ ಅವರಿಗೆ ಕಾಂಗ್ರೆಸ್ ಪರವಾದ ಒಲವು, ಬಿಜೆಪಿ ಸರ್ಕಾರದ ಆಡಳಿತ ವಿರೋಧಿ ಅಲೆ, ಬಗರ್ ಹುಕುಂ ಸಾಗುವಳಿ ಸೇರಿದಂತೆ ಸ್ಥಳೀಯ ಸಮಸ್ಯೆಗಳು, ಸಹೋದರ ಕುಮಾರ್ ವಿರುದ್ದದ ವಿರೋಧಿ ಮತಗಳು ಕೈ ಹಿಡಿಯುವಂತಾಗಿದೆ. ಈ ಕಾರಣದಿಂದ ಭಾರೀ ಮತಗಳ ಅಂತರದಲ್ಲಿ ಅವರು ಜಯದ ನಗೆ ಬೀರುವಂತಾಗಿದೆ.

ಲಾಭ ತಂದ ಕಾಂಗ್ರೆಸ್ ಸೇರ್ಪಡೆ!

*** 2013 ರಲ್ಲಿ ಮಧು ಬಂಗಾರಪ್ಪ ಜೆಡಿಎಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗಿದ್ದರು. ತದನಂತರ 2018 ರಲ್ಲಿ ಅದೇ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಂತರ ಜೆಡಿಎಸ್ ತೊರೆದ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು. ಆ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಮಧು ಬಂಗಾರಪ್ಪಗೆ ಲಾಭವಾಗಿ ಪರಿಣಮಿಸಿದೆ. ಮತ್ತೆ ವಿಧಾನಸಭೆ ಪ್ರವೇಶಿಸಲು ಸಹಕಾರಿಯಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →