shimoga news | ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ಪಿಎಸ್ಐ ಎನ್ ಮಂಜುನಾಥ್ ವಿಧಿವಶ

Shivamogga, July 22: N. Manjunath (55), Sub-Inspector (PSI) of the Shivamogga Vinobanagar Police Station, passed away on July 22 due to a heart attack. He is survived by his wife and a large number of relatives.

ಶಿವಮೊಗ್ಗ (shivamogga), ಜುಲೈ 22: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ (ಪಿಎಸ್ಐ) ಎನ್. ಮಂಜುನಾಥ್ (55) ಅವರು ಜುಲೈ 22 ರಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮೃತರು ಪತ್ನಿ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ.

ಪಾರ್ಥಿವ ಶರೀರವನ್ನು ಶಿವಮೊಗ್ಗದ ವಿನೋಬನಗರದ ನರಸಿಂಹ ಬಡಾವಣೆಯಲ್ಲಿರುವ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕಿಡಲಾಗಿದೆ. ಜುಲೈ 23 ರ ಬೆಳಿಗ್ಗೆ ಶರಾವತಿ ನಗರದ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.

ಕಳೆದ ಕೆಲ ತಿಂಗಳುಗಳಿಂದ ಎನ್. ಮಂಜುನಾಥ್ ಅವರು ತೀವ್ರ ಸ್ವರೂಪದ ಅನಾರೋಗ್ಯದಿಂದ ಬಳಲುತ್ತಿದ್ದರು. ನಿಯಮಿತವಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದರು.

ಜುಲೈ 22 ರಂದು ಕೂಡ ಶಿವಮೊಗ್ಗದಿಂದ ಮಣಿಪಾಲ್ ಆಸ್ಪತ್ರೆಗೆ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಗಾಜನೂರು ಬಳಿ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಸಂತಾಪ : ಎನ್ ಮಂಜುನಾಥ್ ರವರ ಅಕಾಲಿಕ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ವಿನೋಬನಗರ ಠಾಣೆ ಸಹೋದ್ಯೋಗಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Shivamogga, July 22: N. Manjunath (55), Sub-Inspector (PSI) of the Shivamogga Vinobanagar Police Station, passed away on July 22 due to a heart attack. He is survived by his wife and a large number of relatives.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *