shimoga job news | ಶಿವಮೊಗ್ಗ : ಉದ್ಯೋಗಾವಕಾಶ – ಜುಲೈ 29 ರಂದು ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ ನೇರ ಸಂದರ್ಶನ

job news

ಶಿವಮೊಗ್ಗ (shivamogga), ಜುಲೈ 27: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ದಿನಾಂಕ 29-07-2026 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನ ಆಯೋಜಿಸಿದೆ.

ಈ ನೇರ ಸಂದರ್ಶನದಲ್ಲಿ ಎಸ್. ಎಂ. ಎಫ್. ಈ. ಇಂಡಿಯಾ ಕ್ರೆಡಿಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಭಾಗವಹಿಸಲಿದ್ದು, ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಪ್ರವೇಶ ಉಚಿತವಾಗಿದೆ. ಅಭ್ಯರ್ಥಿಗಳು ಪಿಯುಸಿ ಅಥವಾ ಯಾವುದೇ ಪದವಿಯಲ್ಲಿ  ಉತ್ತೀರ್ಣರಾಗಿರಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಹಾಗೂ ಆಧಾರ್ ಕಾರ್ಡ್‌ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ – 577205 ಇಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು: 9380663606, 9108235132 ಅಥವಾ ಖುದ್ದಾಗಿ ಕಚೇರಿಗೆ ಭೇಟಿ ನೀಡಿ  ಮಾಹಿತಿ‌ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Shivamogga: Job Opportunities – Live Interview to be held at the Employment Exchange Office on July 29 | Shivamogga, July 27: The District Employment Exchange Office has organized a live interview for job seekers on 29-07-2026 at 10 am. In this live interview, S. M. F. E. India Credit Private Limited will participate and will select candidates for the vacant posts in the organization through live interview.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *