shimoga job news | ಶಿವಮೊಗ್ಗ : ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ – ಆಗಸ್ಟ್ 14 ರಂದು ನೇರ ಸಂದರ್ಶನ

job news

ಶಿವಮೊಗ್ಗ (shivamogga), ಆಗಸ್ಟ್ 11: ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿವತಿಯಿಂದ 14-08-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಿದೆ.

ಸದರಿ ನೇರ ಸಂದರ್ಶನದಲ್ಲಿ ಅರವಿಂದ್ ಮೋಟಾರ್ಸ್ ಪ್ರೈ. ಲಿ. ಹಾಗೂ ಸ್ವತಂತ್ರ ಮೈಕ್ರೋಫಿನ್ ಪ್ರೈ. ಲಿ. ಸಂಸ್ಥೆಗಳು ಭಾಗವಹಿಸಲಿವೆ. ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.

18 ರಿಂದ 30 ವರ್ಷದೊಳಗಿನ ಎಸ್ ಎಸ್ ಎಲ್ ಸಿ, ಪಿಯುಸಿ, ಡಿಪ್ಲೊಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದವರು ಭಾಗವಹಿಸಬಹುದು. ನೇರ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಹಾಜರಾಗಬೇಕು.

ಸಂದರ್ಶನವು ಶಿವಮೊಗ್ಗದ ಸಾಗರ ರಸ್ತೆ 2 ನೇ ತಿರುವಿನ ಪಂಪಾ ನಗರದ ಗುತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606, 9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shivamogga: Job opportunities in private organizations – Direct interview on August 14 | Shivamogga, August 11: The District Employment Exchange Office of Shivamogga has organized a direct interview on 14-08-2026 at 10 am. Arvind Motors Pvt. Ltd. and Swatantra Microfin Pvt. Ltd. will participate in the said direct interview. Candidates will be selected for the vacant posts through direct interview.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *