ತೀರ್ಥಹಳ್ಳಿ (Thirthahalli ), ಆಗಸ್ಟ್ 12: ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ಹೆಡ್ ಕಾನ್ಸ್’ಟೇಬಲ್ ಶಿವಣ್ಣ (52) ಅವರು ಅನಾರೋಗ್ಯದಿಂದ ವಿಧಿವಶರಾದ ಘಟನೆ ಆಗಸ್ಟ್ 11 ರಂದು ನಡೆದಿದೆ. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಬಂಧು-ಬಳಗವನ್ನು ಅಗಲಿದ್ದಾರೆ.
ಆಗುಂಬೆ ಪೊಲೀಸ್ ಠಾಣೆಯಲ್ಲಿ ಕಳೆದ ಹಲವು ವರ್ಷಗಳಿಂದ ಅವರು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಶಿವಣ್ಣ ಅವರು ಭದ್ರಾವತಿ ತಾಲೂಕಿನ ಆನವೇರಿ ಗ್ರಾಮದವರಾಗಿದ್ದಾರೆ. ಸ್ವಗ್ರಾಮದಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.
ಸಂತಾಪ: ಶಿವಣ್ಣರವರ ಅಕಾಲಿಕ ನಿಧನಕ್ಕೆ ಆಗುಂಬೆ ಠಾಣೆ ಅಧಿಕಾರಿ – ಸಿಬ್ಬಂದಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಆಗುಂಬೆ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಶಿವನಗೌಡ ಮತ್ತವರ ಸಿಬ್ಬಂದಿಗಳು ಪ್ರಾರ್ಥಿಸಿದ್ದಾರೆ.
Thirthahalli : Agumbe Police Station Head Constable Shivanna passes away | Tirthahalli, August 12: Head Constable Shivanna (52) of Agumbe Police Station in thirthahalli taluk passed away on August 11 due to illness.

