ಶಿವಮೊಗ್ಗ (shivamogga), ಆಗಸ್ಟ್ 13: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು, ಅನ್ನಭಾಗ್ಯ ಯೋಜನೆಯಡಿ 2026 ರ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳ ಅನ್ನಭಾಗ್ಯ ಪಡಿತರವನ್ನು, ಆಗಸ್ಟ್ ತಿಂಗಳಲ್ಲಿ ಒಂದೇ ಬಾರಿಗೆ ವಿತರಣೆ ಮಾಡಲು ಸರ್ಕಾರ ಆದೇಶಿಸಿದೆ.
ಅಂತ್ಯೋದಯ ಅನ್ನ ಯೋಜನೆಯಡಿ ಪಡಿತರ ಚೀಟಿಗೆ, ಎರಡು ತಿಂಗಳ ಒಟ್ಟು 70 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ. ಆದ್ಯತಾ ಪಡಿತರ ಚೀಟಿಗೆ ಎರಡು ತಿಂಗಳ ಒಟ್ಟು10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು.
ಪಡಿತರ ಚೀಟಿದಾರರು ಆಹಾರ ಧಾನ್ಯವನ್ನು ಪಡೆಯುವಾಗ ಆಗಸ್ಟ್ ಮತ್ತು ಸೆಪ್ಟಂಬರ್ ಮಾಹೆಗಳ ಹಂಚಿಕೆಗಳಿಗೆ ಒಂದು ಬಾರಿ ಕಡ್ಡಾಯವಾಗಿ ಬಯೋ ನೀಡಿ ಪಡಿತರ ಪಡೆಯುವುದು.
ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಪಡಿತರ ವಿತರಣೆಗೆ ಸರ್ವರ್ ಲಭ್ಯಗೊಳಿಸಿರುವುದರಿಂದ ಆಗಸ್ಟ್ 31 ರೊಳಗಾಗಿ ನ್ಯಾಯಬೆಲೆ ಅಂಗಡಿಗೆ ತೆರಳಿ ಪಡಿತರ ಪಡೆಯುವುದು.
ಪಡಿತರ ವಿತರಣೆ ಸಂಬಂಧ ಯಾವುದೇ ದೂರುಗಳಿದ್ದಲ್ಲಿ ಕೇಂದ್ರ ಸಹಾಯವಾಣಿ 1967 ಕ್ಕೆ ಕರೆ ಮಾಡಿ ಅಥವಾ ಹತ್ತಿರದ ಆಹಾರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
Shimoga, August 11: The Department of Food, Civil Supplies, and Consumer Affairs has issued a government order to distribute the Anna Bhagya ration for August and September 2026 in a single delivery during August under the Anna Bhagya scheme.

