ಶಿವಮೊಗ್ಗ (shivamogga), ಆಗಸ್ಟ್, 18: ಶಿವಮೊಗ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿವತಿಯಿಂದ ಆಗಸ್ಟ್ 21 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀರಾಮ್ ಲೈಫ್ ಇನ್ಸೂರೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಿದೆ.
ಪಿಯುಸಿ ಅಥವಾ ಯಾವುದೇ ಪದವಿ ತೇರ್ಗಡೆಯಾಗಿರುವ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಸದರಿ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು ಶಿವಮೊಗ್ಗದ ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿಯ ಪಂಪಾ ನಗರದ 2 ನೇ ಕ್ರಾಸ್ ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
Shivamogga: Job Opportunity in Private Company – Walk-in Interview on August 21 | Shivamogga, August 18: The District Employment Exchange Office, Shivamogga, has announced a walk-in interview on August 21 at 10 AM for recruitment to vacant posts at Shriram Life Insurance Pvt. Ltd.
Candidates who have completed PUC or any degree and are aged between 18 to 30 years are eligible to attend. Interested and eligible candidates should bring their bio-data and Aadhaar card copies to the interview.
The walk-in interview will be held at the District Employment Exchange Office, 2nd Cross, Pampa Nagar, Guttyappa Colony, Sagar Road, Shivamogga. Entry to the interview is free of charge, officials confirmed.

