ಶಿವಮೊಗ್ಗ (shivamogga), ಸೆಪ್ಟೆಂಬರ್ 01: ಅಂಗವಿಕಲ ವೇತನ ಮಂಜೂರಿಗೆ ವ್ಯಕ್ತಿಯೋರ್ವರಿಗೆ 10,000 ರೂ. ಲಂಚಕ್ಕೆ ಬೇಡಿಕೆಯಿಟ್ಟು ಮುಂಗಡವಾಗಿ 5000 ರೂ. ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ, ಭದ್ರಾವತಿ ತಾಲೂಕಿನ ಕಲ್ಲಿಹಾಳ್ ನಾಡಕಚೇರಿಯ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ ಶಿವಮೊಗ್ಗದ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು 4 ವರ್ಷಗಳ ಸಜೆ ಮತ್ತು 40,000 ರೂ ದಂಡ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ವಿವರ : ಭದ್ರಾವತಿ ತಾಲೂಕಿನ ಡಿ.ಬಿ. ಹಳ್ಳಿಯ ನಿವಾಸಿ ಗಿರೀಶ್ ಎಂಬುವರು ತಮ್ಮ ಹುಟ್ಟು ಮೂಕ ತಂದೆಗೆ ಅಂಗವಿಕಲರ ಪಿಂಚಣಿ ಸೌಲಭ್ಯ ಪಡೆಯಲು ಕಲ್ಲಿಹಾಳ್ ನಾಡಕಚೇರಿಗೆ ತೆರಳಿದ್ದರು.
ಈ ವೇಳೆ ಉಪ ತಹಶೀಲ್ದಾರ್ ಪುಷ್ಪಲತಾ ಅವರು 10,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಗಿರೀಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಸದರಿ ದೂರಿನನ್ವಯ 2017 ರ ಸೆಪ್ಟೆಂಬರ್ 21 ರಂದು ಭದ್ರಾವತಿ ತಾಲೂಕು ಕಚೇರಿಯಲ್ಲಿ, ಗಿರೀಶ್ ಅವರಿಂದ 5,000 ರೂ. ಲಂಚ ಪಡೆಯುತ್ತಿದ್ದಾಗ, ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಅಧಿಕಾರಿಯನ್ನು ಲಂಚದ ಹಣದ ಸಮೇತ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದರು.
ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಹೆಚ್.ಎಸ್.ತಿಪ್ಪೇಸ್ವಾಮಿ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಶಿವಮೊಗ್ಗದ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯವು 2026 ರ ಸೆಪ್ಟೆಂಬರ್ 1 ರಂದು ತೀರ್ಪು ಪ್ರಕಟಿಸಿದೆ. ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಸುಂದರ್ ರಾಜ್ ಅವರು ವಾದ ಮಂಡಿಸಿದ್ದರು.
Bribery case: Female Deputy Tahsildar sentenced to 4 years in prison, Rs. 40 thousand fine! | Shivamogga, September 01: Pushpalatha, Deputy Tahsildar of Kallihal Nadakachery in Bhadravati taluk, who was caught by the Lokayukta while demanding a bribe of Rs. 10,000 from a person for sanctioning disability allowance and receiving Rs. 5000 in advance, has been sentenced to 4 years in prison and a fine of Rs. 40,000 by the 1st Additional District and Sessions and Special Court of Shivamogga.

