ಶಿವಮೊಗ್ಗ (shivamogga), ಸೆಪ್ಟೆಂಬರ್ 03: ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ ಮೆಸ್ಕಾಂ ಇಲಾಖೆಯ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ದುರಸ್ತಿ ಮತ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 06 ರಂದು ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ಇದರಿಂದ ಸೆಪ್ಟೆಂಬರ್ 06 ಮತ್ತು ಸೆಪ್ಟೆಂಬರ್ 07 ರಂದು ಶಿವಮೊಗ್ಗ ನಗರಾದ್ಯಂತ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಅಗತ್ಯಕ್ಕೆ ತಕ್ಕಷ್ಟು ನೀರನ್ನು ಶೇಖರಿಸಿಟ್ಟುಕೊಂಡು ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಕೆಯುಡಬ್ಲ್ಯು ಎಸ್&ಡಿಬಿ) ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.
Shimoga: Drinking water supply disruption on September 6 and 7 | Shimoga, September 03: The MESCOM department has scheduled repair and maintenance work at the 110/11 kV power distribution center that supplies electricity to the Krishnarajendra Water Purification Plant in Shimoga city.
Due to this, power supply to the Krishnarajendra Water Purification Plant will be suspended on September 06. As a result, daily drinking water supply across Shimoga city will be disrupted on September 06 and September 07.
The Karnataka Urban Water Supply and Drainage Board (KUWS&DB) Assistant Executive Engineer of the sub-division has requested the public to store sufficient water in advance and cooperate with the Board during this period.

