shimoga news | ಪಿಂಚಣಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹಲವು ವರ್ಷಗಳ ಬೇಡಿಕೆ ಈಡೇರಿಕೆ!

rupees

ಶಿವಮೊಗ್ಗ (shivamogga), ಸೆಪ್ಟಂಬರ್‌ 05  : ಸಂಧ್ಯಾಸುರಕ್ಷಾ, ವಿಧವಾ ವೇತನ ಮತ್ತು ಇತರೆ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಲ್ಲಿನ ಫಲಾನುಭವಿಗಳ ವಾರ್ಷಿಕ ಆದಾಯ ಮಿತಿಯನ್ನು ₹32,000 ರಿಂದ ₹1,20,000ಕ್ಕೆ ಹೆಚ್ಚಿಸಿ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ.

ಸರ್ಕಾರ ನಿಗಧಿಪಡಿಸಿದ ವಾರ್ಷಿಕ ಆದಾಯಮಿತಿ ₹32,000ಕ್ಕಿಂತ ಹೆಚ್ಚಿದ್ದ ಕಾರಣ ಈ ಹಿಂದೆ ಸೌಲಭ್ಯ ಪಡೆಯುತ್ತಿದ್ದ ಪಿಂಚಣಿದಾರರಿಗೆ ಸ್ಥಗಿತಗೊಳಿಸಲಾಗಿದ್ದ ಪಿಂಚಣಿಯನ್ನು ಅರ್ಹ ಫಲಾನುಭವಿಗಳಿಗೆ ಮುಂದುವರಿಸಲಾಗುವುದು. ಪಿಂಚಣಿದಾರರು ಆತಂಕಕ್ಕೆ ಒಳಗಾಗದಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ತಿಳಿಸಿದ್ದಾರೆ.

ಈ ಆದೇಶಕ್ಕೆ ಮೊದಲು ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ವಾರ್ಷಿಕ ಆದಾಯ ಮಿತಿಯನ್ನು ₹32,000 ಗಳಿಗೆ ನಿಗದಿಪಡಿಸಲಾಗಿತ್ತು. ಆದಾಯ ಮಿತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದ ಹಂತದಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿತ್ತು. ಹಾಗೂ ಸಂದೇಹಾಸ್ಪದವಾಗಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಭೌತಿಕ ಪರಿಶೀಲನೆ ನಡೆಸಲಾಗಿತ್ತು.

ಅರ್ಹ ಫಲಾನುಭವಿಗಳಿಗೆ ಪಿಂಚಣಿಯನ್ನು ಮುಂದುವರೆಸಲು ಮತ್ತು ಅನರ್ಹರನ್ನು ಪಟ್ಟಿಯಿಂದ ಕೈಬಿಡಲು ಸರ್ಕಾರವು ನೂತನವಾಗಿ ಹೊರಡಿಸಿರುವ ಆದೇಶದಲ್ಲಿ ಪಿಂಚಣಿ ಫಲಾನುಭವಿಗಳ ವಾರ್ಷಿಕ ಆದಾಯ ಮಿತಿಯನ್ನು ₹1,20,000 ಗಳಿಗೆ ಹೆಚ್ಚಿಸಿದೆ. ಇದರಿಂದಾಗಿ ಅಸಂಖ್ಯಾತ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ ಎಂದಿನಂತೆ ದೊರೆಯಲಿದೆ ಎಂದವರು ತಿಳಿಸಿದ್ದಾರೆ.

ಗ್ರಾಮ ಆಡಳಿತಾಧಿಕಾರಿ ಅಥವಾ ಸಂಬಂಧಪಟ್ಟ ಅಧಿಕಾರಿಗಳು ಭೌತಿಕ ಪರಿಶೀಲನೆ ನಡೆಸಿ, ಫಲಾನುಭವಿಗಳನ್ನು ‘ಅರ್ಹ’, ‘ಅನರ್ಹ’ ಮತ್ತು ‘ಮೃತಪಟ್ಟವರು’ ಎಂದು ಸ್ಪಷ್ಟವಾಗಿ ವರ್ಗೀಕರಿಸಿ ಸಿದ್ಧಪಡಿಸಿದ ನಿಖರವಾದ ವರದಿಯನ್ನು ಲಾಗ್-ಇನ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಿದ್ದಾರೆ.

ಪರಿಶೀಲನೆಯಲ್ಲಿ ಅರ್ಹರೆಂದು ಕಂಡುಬಂದ ಫಲಾನುಭವಿಗಳಿಗೆ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದ್ದ ಪಿಂಚಣಿ ಹಣವನ್ನು ಬಿಡುಗಡೆ ಮಾಡಲು ತಹಶೀಲ್ದಾರ್ ಅಥವಾ ಅನುಮೋದಿತ ಅಧಿಕಾರಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ. ಮುಂದುವರೆಯುವ ಫಲಾನುಭವಿಗಳ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ/ಅಂಚೆ ಕಚೇರಿ ಖಾತೆ ಸಮರ್ಪಕವಾಗಿ ಲಿಂಕ್ (Aadhaar Seeding) ಆಗಿರುವುದನ್ನು ಖಚಿತಪಡಿಸಿಕೊಳ್ಳುವಂತೆಯೂ ಅವರು ಸೂಚಿಸಿದ್ದಾರೆ.

ನಕಲಿ ದಾಖಲೆ, ತಪ್ಪು ಮಾಹಿತಿ ಅಥವಾ ಆದಾಯ ಮಿತಿ ಮೀರಿದ ಕಾರಣಕ್ಕಾಗಿ ಅನರ್ಹಗೊಂಡವರ ಪಿಂಚಣಿಯನ್ನು ಕಾಯಂ ಆಗಿ ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದಲ್ಲದೆ ನಿಯಮಬಾಹಿರವಾಗಿ ಪಿಂಚಣಿ ಪಡೆದಿರುವುದು ಸಾಬೀತಾದರೆ, ಅಂತಹವರಿಂದ ಈವರೆಗೆ ಪಡೆದ ಹಣವನ್ನು ವಸೂಲಿ ಮಾಡಲು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.

ಮೃತಪಟ್ಟ ಫಲಾನುಭವಿಗಳ ಹೆಸರನ್ನು ತಕ್ಷಣವೇ ಪಿಂಚಣಿ ತಂತ್ರಾಂಶದಿಂದ ತೆಗೆದುಹಾಕುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಿಯಮಾನುಸಾರ ಎಲ್ಲಾ ಪರಿಶೀಲನೆ ಮುಗಿದ ನಂತರವೂ ಪಿಂಚಣಿ ಬರದೇ ಇದ್ದರೆ, ಫಲಾನುಭವಿಗಳು ಆಧಾರ್ ಕಾರ್ಡ್ ನಕಲು, ಬ್ಯಾಂಕ್ ಪಾಸ್ ಬುಕ್ ನಕಲು, ಜೀವಿತ ಪ್ರಮಾಣ ಪತ್ರ(ಅಗತ್ಯವಿದ್ದಲ್ಲಿ), ಪಿಂಚಣಿ ಮಂಜೂರಾತಿ ಆದೇಶದ ಪ್ರತಿಯೊಂದಿಗೆ ಸ್ಥಳೀಯ ನಾಡಕಚೇರಿ ಅಥವಾ ನೆಮ್ಮದಿ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದವರು ತಿಳಿಸಿದ್ದಾರೆ.

ಕುಟುಂಬ ದತ್ತಾಂಶದಿಂದ ಪಡೆದ ಮಾಹಿತಿಗಳನ್ನು ಜಿಲ್ಲೆಯಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿಯೊಂದಿಗೆ ಸಂಯೋಜಿಸಿದಾಗ ಗುರುತಿಸಲಾದ ಸಂದೇಹಾಸ್ಪದ ಫಲಾನುಭವಿಗಳು, ಭೌತಿಕ ಪರಿಶೀಲನೆ ಸಂದರ್ಭದಲ್ಲಿ ದಾಖಲಾತಿಗಳನ್ನು ಹಾಜರುಪಡಿಸದ, ನೀಡಿದ ವಿಳಾಸದಲ್ಲಿ ವಾಸವಿಲ್ಲದ ಮತ್ತು ಆದಾಯ ದೃಢೀಕರಣ ಪತ್ರ ಹಾಜರುಪಡಿಸದ ವ್ಯಕ್ತಿಗಳ ಪಿಂಚಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ಗ್ರಾಮ ಆಡಳಿತ ಅಧಿಕಾರಿಗಳು ಸಂಯೋಜನೆ ಮೊಬೈಲ್‌ ಆಪ್‌ ಮೂಲಕ ಪರಿಶೀಲಿಸಿದ ನಂತರ ಸಂಬಂಧಪಟ್ಟ ತಾಲೂಕುಗಳ ತಹಶೀಲ್ದಾರರಿಂದ ನಿಯಮಾನುಸಾರ ಪರಿಶೀಲಿಸಿ ಅರ್ಪ ಫಲಾನುಭವಿಗಳಿಗೆ ಪಿಂಚಣಿ ಮುಂದುವರೆಸಲು ಸರ್ಕಾರವು ನಿರ್ದೇಶನ ನೀಡಿದೆ.

Good News for Pension Beneficiaries: Long-standing Demand Fulfilled!

Shivamogga, September 05: The Revenue Department has issued an order increasing the annual income limit for beneficiaries under social security pension schemes such as Sandhya Suraksha (old-age pension), widow pension and others — from ₹32 000 to ₹1 20 000

Previously, pensions were discontinued for those whose annual income exceeded ₹32,000. With the revised limit, eligible pensioners will continue to receive benefits. Deputy Commissioner Prabhuling Kavalikatti assured that pensioners need not worry.

The government had earlier fixed the limit at ₹32,000, leading to prolonged discussions and physical verification of doubtful cases. Now, with the new order, pensions will resume for eligible beneficiaries, while ineligible names will be removed.

Officials, including village administrators, will conduct physical verification and classify beneficiaries as “eligible,” “ineligible,” or “deceased.” Verified reports will be uploaded to the official portal. Temporarily withheld pensions will be released upon approval by the Tahsildar or designated authority, provided Aadhaar and bank/post office accounts are properly linked.

Pensions obtained through fake documents, false information, or exceeding the income limit will be permanently canceled. If misuse is proven, recovery of funds will be initiated through legal action. Names of deceased beneficiaries will be promptly removed from the pension software.

If pensions are not received even after verification, beneficiaries may approach the local revenue office or Nemmadi center with Aadhaar copy, bank passbook, life certificate (if required), and pension sanction order copy.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *