ಶಿವಮೊಗ್ಗ (shivamogga), ಆಗಸ್ಟ್ 06: ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ನಲ್ಲಿ, ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಆಹಾರ ಲಭ್ಯವಾಗುತ್ತಿಲ್ಲವೆಂಬ ಆರೋಪಗಳು ವಿದ್ಯಾರ್ಥಿನಿಯರು ಹಾಗೂ ಪೋಷಕರ ವಲಯದಿಂದ ಕೇಳಿಬರಲಾರಂಭಿಸಿದೆ.
ಹೆಸರ ಬಹಿರಂಗಪಡಿಸಲಿಚ್ಛಿಸದ ಕೆಲ ವಿದ್ಯಾರ್ಥಿನಿಯರು ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ. ಕಳಪೆ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಬಳಕೆ ಮಾಡಲಾಗುತ್ತಿದೆ. ಇದರಿಂದ ಹಾಸ್ಟೆಲ್ ನಲ್ಲಿರುವವರು ಸರಿಯಾಗಿ ಊಟ ಮಾಡಲು ಆಗುತ್ತಿಲ್ಲವೆಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಈ ವಿಷಯ ಸಂಬಂಧಿಸಿದವರ ಗಮನಕ್ಕೆ ಬಂದಿದ್ದರೂ ಇಲ್ಲಿಯವರೆಗೂ ಯಾವುದೇ ಕ್ರಮವಾಗಿಲ್ಲ. ಹಾಸ್ಟೆಲ್ ನಲ್ಲಿರುವವರಿಗೆ ಗುಣಮಟ್ಟದ ಆಹಾರ ಲಭ್ಯವಾಗುವ ವ್ಯವಸ್ಥೆ ಮಾಡಲು ಸಂಬಂಧಿಸಿದವರು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ತನಿಖೆ ಮಾಡಲಿ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆಗೆ ಕುರಿತಂತೆ ಕೇಳಿಬರುತ್ತಿರುವ ಆರೋಪಗಳ ಕುರಿತಂತೆ, ಹಿರಿಯ ಅಧಿಕಾರಿಗಳು ಖುದ್ದಾಗಿ ಹಾಸ್ಟೆಲ್’ಗೆ ಭೇಟಿಯಿತ್ತು ಪರಿಶೀಲಿಸಬೇಕು. ಸತ್ಯಾಸತ್ಯತೆ ಪರಿಶೀಲಿಸಿ ವಿದ್ಯಾರ್ಥಿನಿಯರಿಗೆ ನ್ಯಾಯ ಕಲ್ಪಿಸುವ ಕಾರ್ಯ ಮಾಡಬೇಕಾಗಿದೆ.
Shimoga, August 06: In the Bhadravati taluk’s Shankaraghatta concerns have emerged at the Minority Welfare Department’s post-matric girls’ hostel Students and parents allege that the hostel is failing to provide quality food raising complaints about the standard of meals being served.

