shimoga job news | ಶಿವಮೊಗ್ಗ : ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ – ಸೆಪ್ಟೆಂಬರ್ 10 ರಂದು ನೇರ ಸಂದರ್ಶನ

job news

ಶಿವಮೊಗ್ಗ (shivamogga), ಸೆಪ್ಟೆಂಬರ್ 07: ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ದಿನಾಂಕ 10-09-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ‘ಡೆಲಿವರಿ ಪ್ರೈ. ಲಿ.’ ಹಾಗೂ ‘ಶ್ರೀ ರಾಮ್ ಲೈಫ್ ಇನ್ಶೂರೆನ್ಸ್’ ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ. ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.

ಶೈಕ್ಷಣಿಕ ಅರ್ಹತೆ: ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ 18 ರಿಂದ 35 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.

ಉಚಿತ ಪ್ರವೇಶವಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್  ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನವು ಶಿವಮೊಗ್ಗ ನಗರದ ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿಯ ಪಂಪ ನಗರ 2 ನೇ ಕ್ರಾಸ್ ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್ ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606, 9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Shimoga: Job Opportunities in Private Companies – Direct Interview on September 10 | Shimoga, September 07: The District Employment Exchange Office Shimoga has organized a direct interview for job seekers on 10-09-2026 at 10:00 AM. In this direct interview, reputed private companies Delivery Pvt. Ltd. and Shri Ram Life Insurance will participate. Candidates will be selected for vacant positions through the direct interview process.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *