ಶಿವಮೊಗ್ಗ (shivamogga), ಸೆಪ್ಟೆಂಬರ್ 15: ಶಿವಮೊಗ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ 18-09-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಹಮ್ಮಿಕೊಂಡಿದೆ.
ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಅಪೋಲೋ ಫಾರ್ಮಸಿ ಪ್ರೈ. ಲಿ. ಹಾಗೂ ‘ಮುತ್ತೂಟ್ ಮೈಕ್ರೋ ಫಿನ್ ಪ್ರೈ.ಲಿ. ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ. ಸದರಿ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.
ಶೈಕ್ಷಣಿಕ ಅರ್ಹತೆ: ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ 18 ರಿಂದ 35 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನಕ್ಕೆ ಉಚಿತ ಪ್ರವೇಶವಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನವು ಶಿವಮೊಗ್ಗ ನಗರದ ಸಾಗರ ರಸ್ತೆಯ ಪಂಪಾನಗರದ ಗುತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 9380663606 / 9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Shivamogga: Job Openings in Reputed Private Companies – Walk-in Interview on September 18!
Shivamogga, September 15: The District Employment Exchange Office in Shivamogga city has organized a walk-in interview for job aspirants on September 18, 2026, at 10:00 AM.
Reputed private companies, namely Apollo Pharmacy Pvt. Ltd. and Muthoot Microfin Pvt. Ltd., are participating in this drive. Candidates will be selected for vacant positions in these organizations through the walk-in interview process.
Educational Qualification: Candidates aged between 18 and 35 who have passed SSLC, PUC, ITI, Diploma, or any degree course are eligible to participate. There is no fee for the interview.
Interested candidates may attend the interview directly, bringing their resumes and copies of their Aadhaar cards.
The interview will be held at the District Employment Exchange Office, located at Gutyappa Colony, Pampa Nagar, Sagar Road, Shivamogga city. Officials stated in a release that for further information, one may contact the District Employment Exchange Office in person or via telephone at 9380663606 / 9108235132.

