shimoga power cut news | ಶಿವಮೊಗ್ಗ ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶಗಳಲ್ಲಿ ಸೆಪ್ಟೆಂಬರ್ 30 ರಂದು ವಿದ್ಯುತ್ ವ್ಯತ್ಯಯ

power cut

ಶಿವಮೊಗ್ಗ (shivamogga), ಸೆಪ್ಟೆಂಬರ್ 28: ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ 66 ಕೆವಿ ಎಂಜಿ-1 ಬಿಸಿ ಯುನಿಟ್‌ನಲ್ಲಿ, 2 ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 30 ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ಕರೆಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ,

ಬೂಕ್ಲಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು,

ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಕಲ್ಲಾಪುರ, ಬಸವನಗಂಗೂರು,

ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಕೋರಿದೆ.

ಹೊಳೆಹೊನ್ನೂರು ಸುತ್ತಮುತ್ತ ಸೆಪ್ಟೆಂಬರ್ 29 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shimoga), ಸೆಪ್ಟೆಂಬರ್ 28: 220 ಕೆವಿ ಎಂಆರ್‌ಎಸ್ ಮುಖ್ಯ ಸ್ವೀಕರಣಾ ಕೇಂದ್ರದಲ್ಲಿ 66 ಕೆವಿ ಡಿವಿಜಿ-01 ಬೇ ಯ ತ್ರೈಮಾಸಿಕ ನಿರ್ವಹಣಾ ಕೆಲಸವಿರುವುದರಿಂದ ಸೆಪ್ಟೆಂಬರ್ 29 ರಂದು ಬೆಳಿಗ್ಗೆ 09.30 ರಿಂದ ಸಂಜೆ 05.30 ರವರೆಗೆ ಹೊಳೆಹೊನ್ನೂರು ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಹೊಳೆಹೊನ್ನೂರು, ನಾಗತಿಬೆಳಗಲು, ದಾಸರಕಲ್ಲಹಳ್ಳಿ, ಕೆ. ಕೆ.ಮಗ್ಗೆ, ಯಡೇಹಳ್ಳಿ, ಅರಹತೊಳಲು, ಎಸ್.ಕೆ.ಮಗ್ಗೆ, ಸಿದ್ಲಿಪುರ, ಹನುಮಂತಾಪುರ  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮತ್ತು ರೈತರುಗಳು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *