ಶಿವಮೊಗ್ಗ : ಹಣಕ್ಕಾಗಿ ಯುವತಿಯ ಅಪಹರಣ – ನಿಗೂಢವಾದ ಪ್ರಕರಣ!

ಶಿವಮೊಗ್ಗ, ಮೇ 15: ಹಣಕ್ಕಾಗಿ ಯುವತಿಯೋರ್ವಳನ್ನು ದುಷ್ಕರ್ಮಿಗಳು ಅಪಹರಿಸಿರುವ ಘಟನೆ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಕುರಿತಂತೆ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ರಂಜಿತಾ ಬಿ (22) ಕಿಡ್ನ್ಯಾಪ್ ಆದ ಯುವತಿ ಎಂದು ಗುರುತಿಸಲಾಗಿದೆ. ಮೇ 14 ರಂದು ಸಂಜೆ 5 ಗಂಟೆ ರಾತ್ರಿ 9.30 ರ ನಡುವೆ ಯುವತಿಯ ಕಿಡ್ನ್ಯಾಪ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗ, ಮೇ 15: ಹಣಕ್ಕಾಗಿ ಯುವತಿಯೋರ್ವಳನ್ನು ದುಷ್ಕರ್ಮಿಗಳು ಅಪಹರಿಸಿರುವ ಘಟನೆ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆ ಕುರಿತಂತೆ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ರಂಜಿತಾ ಬಿ (22) ಕಿಡ್ನ್ಯಾಪ್ ಆದ ಯುವತಿ ಎಂದು ಗುರುತಿಸಲಾಗಿದೆ. ಮೇ 14 ರಂದು ಸಂಜೆ 5 ಗಂಟೆ ರಾತ್ರಿ 9.30 ರ ನಡುವೆ ಯುವತಿಯ ಕಿಡ್ನ್ಯಾಪ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಹರಣಕ್ಕೊಳಗಾದ ಯುವತಿಯು ಸುಮಾರು 5.1 ಅಡಿ ಎತ್ತರ, ಬಿಳಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಕಾಣೆಯಾದ ವೇಳೆ ನೇವಿ ಬ್ಲೂ ಬಣ್ಣದ ಚೂಡಿದಾರ್  ಧರಿಸಿರುತ್ತಾರೆ. ಸಾರ್ವಜನಿಕರಿಗೆ ಯುವತಿಯ ಸುಳಿವು ಲಭ್ಯವಾದಲ್ಲಿ ಜಯನಗರ ಪೊಲೀಸ್ ಠಾಣೆ ಅಥವಾ ಜಿಲ್ಲಾ ನಿಸ್ತಂತು ಕೇಂದ್ರ ಅಥವಾ ಪೊಲೀಸ್ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ : 08182-261400/261413/261416 ನ್ನು ಸಂಪರ್ಕಿಸಬಹುದೆಂದು ಜಯನಗರ ಪೊಲೀಸ್  ಠಾಣೆ  ಇನ್ಸ್ ಪೆಕ್ಟರ್ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ನಿಗೂಢ – ಅನುಮಾನ?: ಸದ್ಯ ಅಪಹರಣಕ್ಕೊಳಗಾದ ಯುವತಿಯು ಹೊರ ಜಿಲ್ಲೆಯವರಾಗಿದ್ದು, ನಗರದಲ್ಲಿ ನರ್ಸಿಂಗ್ ಕೋರ್ಸ್ ವೊಂದರ ಅಭ್ಯಾಸ ನಡೆಸುತ್ತಿದ್ದಾರೆ. ಸವಳಂಗ ರಸ್ತೆಯ ಮಹಿಳಾ ಪಿಜಿಯೊಂದರಲ್ಲಿ ತಂಗಿದ್ದಾರೆ ಎಂದು ತಿಳಿದುಬಂದಿದೆ.

ಯುವತಿ ಅಪಹರಣಕ್ಕೊಳಗಾದ ವಿಷಯ ತಿಳಿಯುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಪ್ರತ್ಯೇಕ ತಂಡಗಳಾಗಿ ತನಿಖೆ ನಡೆಸಲಾರಂಭಿಸಿದ್ದಾರೆ. ವಿವಿಧೆಡೆಯ ಸಿಸಿ ಕ್ಯಾಮರಾಗಳ ದೃಶ್ಯಾವಳಿ ಪರಿಶೀಲಿಸಿ ವಿವರ ಕಲೆ ಹಾಕಲಾರಂಭಿಸಿದ್ದಾರೆ ಎನ್ನಲಾಗಿದೆ.

ಅಪಹರಣ ಪ್ರಕರಣದ ಸುತ್ತ ಅನುಮಾನದ ಹುತ್ತ ನಿರ್ಮಾಣವಾಗಿದೆ. ಅಪಹರಣವಾಗಿದ್ದು ನಿಜವೇ? ಕಾರಣವೇನು? ಎಂಬುವುದು ಪೊಲೀಸರ ತನಿಖೆಯ ನಂತರಷ್ಟೆ ಹೆಚ್ಚಿನ ವಿವರಗಳು ಹೊರ ಬರಬೇಕಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *