shimoga job news | ಶಿವಮೊಗ್ಗದಲ್ಲಿ ಅಕ್ಟೋಬರ್ 08 ರಂದು ಖಾಸಗಿ ಕಂಪನಿಯಿಂದ ಸಂದರ್ಶನ : ಖಾಲಿ ಹುದ್ದೆಗಳಿಗೆ ನೇಮಕ

job news

ಶಿವಮೊಗ್ಗ (shivamogga), ಅಕ್ಟೋಬರ್ 06: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿವತಿಯಿಂದ ಅಕ್ಟೋಬರ್ 08 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ಇಟಾಚಿ ಕ್ಯಾಶ್ ಮ್ಯಾನೇಜ್‌ಮೆಂಟ್ ಸರ್ವಿಸ್ ಪ್ರೈ.ಲಿ. ಖಾಸಗಿ ಕಂಪನಿ ಭಾಗವಹಿಸಲಿದ್ದು, ಕಂಪನಿಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.

08-10-2026 ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗ ನಗರದ ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿಯ ಪಂಪಾನಗರ 2 ನೇ ಕ್ರಾಸ್ ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.

ಎಸ್ ಎಸ್ ಎಲ್ ಸಿ, ಪಿಯುಸಿ, ಮತ್ತು ಯಾವುದೇ ಪದವಿ ಪಡೆದಿರುವ 18 ರಿಂದ 35 ವರ್ಷ ಒಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606 / 9108235132 ಗಳಿಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Private Company Interview in Shivamogga on October 8: Recruitment for Vacancies | Shivamogga, October 5: A direct interview has been organized by the District Employment Exchange on October 8 at 10:00 AM.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *