ಶಿವಮೊಗ್ಗ (shivamogga), ಅಕ್ಟೋಬರ್ 14: ಶಿವಮೊಗ್ಗ ನಗರದ ಉದ್ಯೋಗ ವಿನಿಮಯ ಕಚೇರಿಯಲ್ಲಿ 16-10-2026 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಸದರಿ ನೇರ ಸಂದರ್ಶನದಲ್ಲಿ ಪಿರಮಲ್ ಫೈನಾನ್ಸ್ ಪ್ರೈ. ಲಿ. ಖಾಸಗಿ ಕಂಪನಿ ಭಾಗವಹಿಸುತ್ತಿದ್ದು, ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶೈಕ್ಷಣಿಕ ಅರ್ಹತೆ: ಯಾವುದೇ ಪದವಿ ತೇರ್ಗಡೆಯಾದ 18 ರಿಂದ 35 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಉಚಿತ ಪ್ರವೇಶವಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.
ಶಿವಮೊಗ್ಗದ ಗುತ್ಯಪ್ಪ ಕಾಲೋನಿಯ ಪಂಪಾ ನಗರ 2 ನೇ ಕ್ರಾಸ್ ನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606 / 9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Direct Interview for Job Seekers in Shivamogga on October 16 | Shivamogga, October 14: A direct interview for job seekers has been organized at the Shivamogga City Employment Exchange on October 16, 2026, at 10:00 AM.

