shimoga court news | ಶಿವಮೊಗ್ಗ : 24 ವರ್ಷದ ಯುವಕನಿಗೆ 10 ವರ್ಷ ಜೈಲು, 1.10 ಲಕ್ಷ ರೂ. ದಂಡ!

shimoga court building

ಶಿವಮೊಗ್ಗ (shivamogga), ಅಕ್ಟೋಬರ್ 18: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್’ಟಿಎಸ್’ಸಿ -1) ತೀರ್ಪು ನೀಡಿದೆ.

24 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದವನು. ಅಪರಾಧಿಗೆ ಜೈಲು ಶಿಕ್ಷೆಯ ಜೊತೆಗೆ 1.20 ಲಕ್ಷ ರೂ. ದಂಡ ವಿಧಿಸಿದೆ. ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ಅವರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ : ಅಪರಾಧಿಯು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತಂತೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ಅವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

Shivamogga: 10 Years in Prison and a Fine of Rs 1.10 Lakh for 24-Year-Old Man! | Shivamogga, October 18: The Additional District and Sessions Court (FTSC-1) in Shivamogga has sentenced a 24-year-old man to 10 years of rigorous imprisonment for committing sexual assault against a minor girl. The 24-year-old man is the individual who has been sentenced. In addition to the prison term, the court has also imposed a fine of Rs 1.20 lakh on the convict.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *