gruhalaxmi yojana | shimoga news | ದಸರಾ ಹಬ್ಬ : ಗೃಹಲಕ್ಷ್ಮಿ ಹಣ ಬಿಡುಗಡೆ!

Gruha-Lakshmi

ಶಿವಮೊಗ್ಗ (shivamogga), ಅಕ್ಟೋಬರ್ 19 : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿಯ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆಯ 33 ನೇ ಕಂತಿನ ಹಣ ಬಿಡುಗಡೆಯಾಗಿದೆ. ಎಲ್ಲಾ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ, ನೇರವಾಗಿ ಡಿ.ಬಿ.ಟಿ. ಮೂಲಕ ತಲಾ 2,000 ರೂ. ಜಮೆ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ  ಸಿ.ಎಸ್. ಚಂದ್ರಭೂಪಾಲ ತಿಳಿಸಿದ್ದಾರೆ.

ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಮತ್ತು ಸಬಲೀಕರಣವನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಇಲ್ಲಿಯವರೆಗೆ 32 ಕಂತುಗಳಲ್ಲಿ ಫಲಾನುಭವಿಗಳ ಖಾತೆಗೆ ತಲಾ ಎರಡು ಸಾವಿರ ರೂ.ಗಳಂತೆ ಒಟ್ಟು ರೂ. 64 ಸಾವಿರ ರೂ. ಪಾವತಿಯಾಗಿವೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಪ್ರಸ್ತುತ 33 ನೇ ಕಂತಿನಲ್ಲಿ ಶಿವಮೊಗ್ಗ ಜಿಲ್ಲೆಯ ಒಟ್ಟು 3,78,031 ಅರ್ಹ ಮಹಿಳಾ ಫಲಾನುಭವಿಗಳಿಗೆ ಒಟ್ಟು ರೂ. 75,60,62,000 (ರೂ. 75.60 ಕೋಟಿ) ಹಣ ಸಂದಾಯವಾಗಿದೆ. ಸರ್ಕಾರದ ಈ ಸಕಾಲಿಕ ಸಹಾಯದಿಂದ ದಸರಾ ಹಬ್ಬದ ಸಂಭ್ರಮದಲ್ಲಿರುವ ಮನೆ ಒಡತಿಯರಿಗೆ ಆರ್ಥಿಕವಾಗಿ ಹೆಚ್ಚಿನ ನೆರವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

‘Gruhalakshmi’ Funds Released During the Dasara Festival! | Shivamogga, October 19: The 33rd installment of funds under the ‘Gruhalakshmi’ scheme—one of the Karnataka government’s ambitious ‘Pancha Guarantee’ (five guarantee) schemes—has been released. C.S. Chandrabhupala, District President of the Shivamogga District Guarantee Schemes Implementation Authority, stated that Rs. 2,000 has been credited to the bank accounts of all eligible beneficiaries via Direct Benefit Transfer (DBT).

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *