shikaripra news | ಅಪಘಾತದಲ್ಲಿ ಗಾಯಗೊಂಡಿದ್ದ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ಸಿಬ್ಬಂದಿ ವಿಧಿವಶ!

Shikaripura Town Police Station Personnel, Injured in Accident, Passes Away! | Shikaripura, October 28: A constable from the Shikaripura Town Police Station, who had sustained serious injuries in an accident and was undergoing treatment at Manipal Hospital, passed away on October 28 after treatment proved unsuccessful.

ಶಿಕಾರಿಪುರ (shikaripura), ಅಕ್ಟೋಬರ್ 28: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ಕಾನ್ಸ್’ಟೆಬಲ್ ಓರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 28 ರಂದು ನಡೆದಿದೆ.

ಗಿರೀಶ್ ಕುಮಾರ್ (33) ಮೃತಪಟ್ಟವರೆಂದು ಗುರುತಿಸಲಾಗಿದೆ. ಕಳೆದ ಎರಡು ವಾರಗಳ ಹಿಂದೆ ಶಿಕಾರಿಪುರ ತಾಲೂಕಿನ ಚಿಕ್ಕಾಪುರ ಕ್ರಾಸ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗಿರೀಶ್ ಕುಮಾರ್ ರವರು ಮೂಲತಃ ಶಿಕಾರಿಪುರ ತಾಲೂಕಿನ ಸಾಲೂರು ಗ್ರಾಮದವರಾಗಿದ್ದಾರೆ. ಅಕ್ಟೋಬರ್ 29 ರಂದು ಮೃತರ ಸ್ವಗ್ರಾಮದಲ್ಲಿ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನೆರವೇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಂತಾಪ ಸೂಚನೆ : ಗಿರೀಶ್ ಕುಮಾರ್ ಅವರ ನಿಧನಕ್ಕೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಶರತ್ ಹೆಚ್ ಹಾಗೂ ಠಾಣೆಯ ಸಹೋದ್ಯೋಗಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Shikaripura Town Police Station Personnel, Injured in Accident, Passes Away! | Shikaripura, October 28: A constable from the Shikaripura Town Police Station, who had sustained serious injuries in an accident and was undergoing treatment at Manipal Hospital, passed away on October 28 after treatment proved unsuccessful.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *