ಶಿವಮೊಗ್ಗ (shivamogga), ಅಕ್ಟೋಬರ್ 29: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್’ಟಿಎಸ್’ಸಿ-1) ತೀರ್ಪು ನೀಡಿದೆ.
23 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದವನು. ಜೈಲು ಶಿಕ್ಷೆಯ ಜೊತೆಗೆ 1,01,000 ರೂ. ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ತೀರ್ಪು ನೀಡಿದೆ.
ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ಅವರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ : 13 ವರ್ಷದ ಬಾಲಕಿ ಮೇಲೆ ಅಪರಾಧಿ ಯುವಕನು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತಂತೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿತ್ತು. ಅಂದಿನ ಇನ್ಸ್’ಪೆಕ್ಟರ್ ಚಂದ್ರಕಲಾ ಅವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.
Shivamogga: 20 Years of Rigorous Imprisonment for 23-Year-Old Man! | Shivamogga, October 29: The Additional District and Sessions Court (FTSC-1) in Shivamogga has sentenced a 23-year-old man to 20 years of rigorous imprisonment for sexually assaulting a minor girl. In addition to the prison term, a fine of Rs 1,01,000 has been imposed. The court has also ordered that compensation of Rs 4 lakh be provided to the victim.

