shimoga job news | ಶಿವಮೊಗ್ಗ : ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ – ನವೆಂಬರ್ 05 ರಂದು ನೇರ ಸಂದರ್ಶನ

job news

ಶಿವಮೊಗ್ಗ (shivamogga), ನವೆಂಬರ್ 03: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 05 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ನೆಕ್ಸ್ ಚರ್ ಮತ್ತು ಮುತ್ತೂಟ್ ಮನಿ ಪ್ರೈ.ಲಿ., ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.

ಸ್ಥಳ : 05-11-2026 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದ್ದು, ಪಿ.ಯು.ಸಿ. ಹಾಗೂ ಯಾವುದೇ ಪದವಿ ಪಡೆದ 18 ರಿಂದ 35 ವರ್ಷದ ಒಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606ಗಳಿಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Shivamogga: Job Opportunities in Private Organizations – Walk-in Interviews on November 5th
Shivamogga, November 3rd: The District Employment Exchange Office has organized walk-in interviews for job seekers on November 5th at 10:00 AM. Reputed private companies, namely Nexchar and Muthoot Money Pvt. Ltd., will participate in this job fair and select candidates through direct interviews. #shimoga #shivamogga #JobOpportunity #jobnews #vacancy

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *