Shimoga news | ಭಾರತ್ ಜೋಡೋ ಯುವ ಸಂಘದ ಶಿವಮೊಗ್ಗ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ

ಬೆಂಗಳೂರು (bengaluru), ನವೆಂಬರ್ 05 : ಶಿವಮೊಗ್ಗ ಜಿಲ್ಲೆಯ ‘ಭಾರತ್ ಜೋಡೋ ಯುವ ಸಂಘ’ದ ನೂತನ ಜಿಲ್ಲಾ ಯುವ ಸಂಯೋಜಕರಾಗಿ ನೇಮಕಗೊಂಡಿರುವ ಟಿ.ಡಿ. ಗೀತೇಂದ್ರ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಅಭಿನಂದಿಸಿ, ಶುಭ ಹಾರೈಸಿದರು.
ಕರ್ನಾಟಕ ಸರ್ಕಾರವು ಯುವ ಸಬಲೀಕರಣ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಯುವಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ‘ಭಾರತ್ ಜೋಡೋ ಯುವ ಸಂಘ’ (Bharat Jodo Yuva Sangha – BJYS) ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಆಶಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉತ್ತಮ ಕಾರ್ಯನಿರ್ವಹಿಸುವುದರ ಜೊತೆಗೆ ಜಿಲ್ಲೆಯ ಯುವಕರನ್ನು ಸಂಘಟಿಸಿ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಬೇಕು ಎಂದು ಸಚಿವ ಮಧು ಬಂಗಾರಪ್ಪ ಅವರು ಗೀತೇಂದ್ರ ಅವರಿಗೆ ಸಲಹೆ ನೀಡಿ ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಆಯನೂರು ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್, ಒಬಿಸಿ ರಾಜ್ಯ ಘಟಕದ ಸಂಯೋಜಕ ಜಿ.ಡಿ. ಮಂಜುನಾಥ್, ಹಾಪ್‌ಕಾಮ್ಸ್ ಅಧ್ಯಕ್ಷ ವಿಜಯ್ ಕುಮಾರ್ ಹಾಗೂ ಶರತ್ ಮರಿಯಪ್ಪ ಉಪಸ್ಥಿತರಿದ್ದರು.
Bengaluru, November 5: Madhu Bangarappa, Minister for School Education and Literacy and Minister in-charge of Shivamogga district, congratulated T.D. Geetendra—who has been appointed as the new District Youth Coordinator for the ‘Bharat Jodo Yuva Sangha’ in Shivamogga district—at his home office in Bengaluru and extended his best wishes.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *