Shimoga accident news | ಶಿವಮೊಗ್ಗ : ಭೀಕರ ರಸ್ತೆ ಅಪಘಾತ – ಇಬ್ಬರು ಸಾವು!

ಶಿವಮೊಗ್ಗ (shivamogga), ನವೆಂಬರ್ 21:  ಡಸ್ಟರ್ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ನವೆಂಬರ್ 21 ರ ಸಂಜೆ ಶಿವಮೊಗ್ಗ ನಗರದ ಹೊರವಲಯ ಅನುಪಿನಕಟ್ಟೆಯ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ.

ಮಹಾನಗರ ಪಾಲಿಕೆ ಕಚೇರಿಯಲ್ಲಿ ಹೊರಗುತ್ತಿಗೆ ಲೋಡರ್ಸ್ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಕಿರಣ್ (28) ಹಾಗೂ ಅವರ ಪತ್ನಿ ಸೌಮ್ಯ (22) ಮೃತಪಟ್ಟವರೆಂದು ಗುರುತಿಸಲಾಗಿದೆ.

ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗ ಕೂಡ ಜಖಂ ಆಗಿದೆ. ಕಳೆದ ಎರಡು ತಿಂಗಳ ಹಿಂದಷ್ಟೇ ಕಿರಣ್ ಅವರು ವಿವಾಹವಾಗಿದ್ದರು.

ಅಪಘಾತದ ಕುರಿತಂತೆ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ. ಘಟನಾ ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

Shivamogga – Horrific Road Accident – Two Dead! | Shivamogga, November 21: A couple traveling on a motorcycle died following a collision with a car. The incident took place in Shivamogga on the evening of November 21.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *