shimoga news | ಶಾರದಾ ಪೂರ್ಯನಾಯ್ಕ್  ಜನ್ಮದಿನದ ಪ್ರಯುಕ್ತ ವಿಶೇಷ ಕಾರ್ಯಕ್ರಮ : ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Special Event Marking Sharada Puryanaik’s Birthday: Distribution of School Bags to Government School Students | Shivamogga, November 23: On November 23, in the village of Tyajavalli in Shivamogga Taluk, a program was organized by supporters to mark the birthday of MLA Sharada Puryanaik. As part of a special campaign titled "Save and Nurture Government Schools" (*Sarkari Shale Ulisi Belesi*), school bags were distributed to students.

ಶಿವಮೊಗ್ಗ (shivamogga), ನವೆಂಬರ್ 23: ಶಿವಮೊಗ್ಗ ತಾಲೂಕು ತ್ಯಾಜವಳ್ಳಿ ಗ್ರಾಮದಲ್ಲಿ ನವೆಂಬರ್ 23 ರಂದು ಶಾಸಕಿ ಶಾರದಾ ಪೂರ್ಯನಾಯ್ಕ್  ಅವರ ಜನ್ಮದಿನದ ಪ್ರಯುಕ್ತ, ಅಭಿಮಾನಿಗಳವತಿಯಿಂದ ‘ಸರ್ಕಾರಿ ಶಾಲೆ ಉಳಿಸಿ ಬೆಳೆಸಿ’ ಎಂಬ ವಿಶೇಷ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸರ್ಕಾರಿ ಶಾಲೆಗಳ ಬಗ್ಗೆ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿದರು. ಮುಖ್ಯಮಂತ್ರಿಗಳು ಸೇರಿದಂತೆ ಹಲವು ಜನಪ್ರತಿನಿಧಿಗಳು ತಮ್ಮದೇ ಆದ ಶಿಕ್ಷಣ ಸಂಸ್ಥೆಗಳು ಹಾಗೂ ಟ್ರಸ್ಟ್‌ಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಆದರೆ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಆಸರೆಯಾಗಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಯತ್ತಲೂ ಸಮಾನ ಗಮನ ಹರಿಸಬೇಕಿದೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ, ಶೈಕ್ಷಣಿಕ ಉಪಕರಣಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸಮಯಕ್ಕೆ ಸರಿಯಾಗಿ ಒದಗಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಮಕ್ಕಳು ಪ್ರತಿದಿನ ತಪ್ಪದೇ ಶಾಲೆಗೆ ಹಾಜರಾಗಿ ಉತ್ತಮ ಶಿಕ್ಷಣ ಪಡೆಯಬೇಕು. ಶಿಕ್ಷಣದ ಮೂಲಕ ಉನ್ನತ ಸಾಧನೆ ಮಾಡಿ ಭವಿಷ್ಯದಲ್ಲಿ ಉತ್ತಮ ಸ್ಥಾನಮಾನ ಗಳಿಸುವ ಗುರಿ ಹೊಂದಬೇಕು ಎಂದು ಪ್ರೋತ್ಸಾಹಿಸಿದರು.

ಜನ್ಮದಿನವನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಮೂಲಕ ಸಾಮಾಜಿಕ ಕಳಕಳಿಯ ಕಾರ್ಯಕ್ರಮವಾಗಿ ಆಚರಿಸಿರುವುದು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಯಿತು.

Special Event Marking Sharada Puryanaik’s Birthday: Distribution of School Bags to Government School Students | Shivamogga, November 23: On November 23, in the village of Tyajavalli in Shivamogga Taluk, a program was organized by supporters to mark the birthday of MLA Sharada Puryanaik. As part of a special campaign titled “Save and Nurture Government Schools” (*Sarkari Shale Ulisi Belesi*), school bags were distributed to students.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *