shimoga news | ಶಿವಮೊಗ್ಗ : ಕೊಲೆ ಪ್ರಕರಣ – ಇಬ್ಬರಿಗೆ ಜೀವಾವಧಿ ಶಿಕ್ಷೆ!

shimoga court building

ಶಿವಮೊಗ್ಗ (shivamogga), ನವೆಂಬರ್ 25: ವ್ಯಕ್ತಿಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನವೆಂಬರ್ 24 ರಂದು ತೀರ್ಪು ನಿಡಿದೆ.

ಗಣೇಶ್ (34) ಹಾಗೂ ಗಿರೀಶ್ (23) ಶಿಕ್ಷೆಗೊಳಗಾದ ಅಪರಾಧಿಗಳೆಂದು ಗುರುತಿಸಲಾಗಿದೆ. ಶಿಕ್ಷೆಯ ಜೊತೆಗೆ 1 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಳ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಮಮತಾ ಬಿ ಎಸ್ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ : ಕೊಲೆಗೀಡಾದ ಸ್ಟೀಫನ್ ಶ್ರೀನಿವಾಸ್ (68) ಅವರು ಗ್ಯಾರೇಜ್ ನಡೆಸುತ್ತಿದ್ದರು. ಜಾಗದ ವಿಚಾರದಲ್ಲಿ ಉಂಟಾದ ವೈಮನಸ್ಸಿನಿಂದ 23-11-2020 ರಂದು ಇಬ್ಬರು ಅಪರಾಧಿಗಳು ಸೇರಿ ಸ್ಟೀಫನ್ ಶ್ರೀನಿವಾಸ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು.

ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್ಸ್’ಪೆಕ್ಟರ್ ದೀಪಕ್ ಅವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

Shivamogga: Murder Case – Life Imprisonment for Two! Shivamogga, November 25: In connection with a murder case, the 1st Additional District and Sessions Court in Shivamogga delivered a verdict on November 24, sentencing two individuals to life imprisonment.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *