ಶಿವಮೊಗ್ಗ : ಸೋಗಾನೆ, ಬಿದರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೇ 21 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 21 ರಂದು ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಶಿವಮೊಗ್ಗ, ಮೇ.19: ಶಿವಮೊಗ್ಗದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110  ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಮೇ 21 ರಂದು ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8  ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಕಿಯೊನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ, ಬಸವಾಪುರ, ಹಾತಿಕಟ್ಟೆ

ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *