ಪ್ರಮಾಣ ವಚನ ಸ್ವೀಕಾರ  : ಕಾಂಗ್ರೆಸ್ ಸರ್ಕಾರದ ಅಧಿಕಾರ!

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ರಾಜ್ಯದ ವಿವಿಧೆಡೆಯಿಂದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸಮಾರಂಭಕ್ಕೆ ಸಾಕ್ಷಿಯಾದರು. ಸಚಿವರಾದವರು: ಸಚಿವರಾಗಿ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೋಳಿ, ಪ್ರಿಯಾಂಕ ಖರ್ಗೆ ಹಾಗೂ ಜಮೀರ್ ಅಹಮದ್ ಖಾನ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರಾಗಿದ್ದಾರೆ.

ಬೆಂಗಳೂರು, ಮೇ 20: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ 8 ಶಾಸಕರು ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.

ಸಚಿವರಾದವರು: ಸಚಿವರಾಗಿ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೋಳಿ, ಪ್ರಿಯಾಂಕ ಖರ್ಗೆ ಹಾಗೂ ಜಮೀರ್ ಅಹಮದ್ ಖಾನ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರಾಗಿದ್ದಾರೆ.

ಪ್ರಮುಖರು ಭಾಗಿ: ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ರಾಜಸ್ಥಾನ ಸಿಎಂ ಅಶೋಕ್ ಗಹ್ಲೋಟ್,

ಬಿಹಾರ ಸಿಎಂ ನಿತೀಶ್ ಕುಮಾರ್, ಛತ್ತೀಸ್ ಘಡ ಸಿಎಂ ಭೂಪೇಶ್ ಬಫೇಲ್, ಹಿಮಾಚಲ ಪ್ರದೇಶ ಸಿಎಂ ಸುಖೀಂದರ್ ಸಿಂಗ್, ಪುದುಚೇರಿ ಸಿಎಂ ರಂಗಸ್ವಾಮಿ, ಜಾರ್ಖಾಂಡ್ ಸಿಎಂ ಹೇಮಂತ್ ಸೋರೆನ್, ಮಾಜಿ ಸಿಎಂ ಫಾರೂಕ್ ಅಬ್ದುಲ್, ಮೆಹಬೂಬ ಮುಫ್ತಿ ಸೇರಿದಂತೆ ಗಣ್ಯರು ಭಾಗವಹಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಮಾರಂಭಕ್ಕೆ ಆಗಮಿಸಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

2 Comments on “ಪ್ರಮಾಣ ವಚನ ಸ್ವೀಕಾರ  : ಕಾಂಗ್ರೆಸ್ ಸರ್ಕಾರದ ಅಧಿಕಾರ!”

  1. All D best Hon’ble Chief minister of Karnataka siddaramaiah very proud and very powerful person.

  2. Namma Athy machina nayawantha,pramanika,dheryawntha, Karnatakada Holy Sri Maan shree Siddaramaiah Awargge Muqiya Manthriya Hardika Shubhashiegalu…..All the best

Leave a Reply

Your email address will not be published. Required fields are marked *