ಮಳೆಗಾಲ : ತಗ್ಗು ಪ್ರದೇಶಗಳು ಜಲಾವೃತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಿವಮೊಗ್ಗ ಡಿಸಿ ಖಡಕ್ ಸೂಚನೆ!

ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಶಿವಮೊಗ್ಗ/ಬೆಂಗಳೂರು, ಮೇ.24 : ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು.

ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಎಲ್ಲಾ ಚರಂಡಿಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಕೃತಕ ನೆರೆ ಉಂಟಾಗದತೆ ಕ್ರಮ ಕೈಗೊಳ್ಳಬೇಕು. ಪ್ರಮುಖ ಕಾಲುವೆಗಳ ಹೂಳೆತ್ತುವ ಕಾರ್ಯವನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಕಂಟ್ರೋಲ್ ರೂಂ: ಎಲ್ಲಾ ತಾಲೂಕುಗಳಲ್ಲಿ ಅತಿವೃಷ್ಟಿಗೆ ಸಂಬAಧಿಸಿದAತೆ ತುರ್ತು ನೆರವು, ಕ್ರಮಗೊಳ್ಳಲು ಅನುಕೂಲವಾಗುವಂತೆ 24×7 ನಿಯಂತ್ರಣ ಕೊಠಡಿಗಳನ್ನು ತಕ್ಷಣ ಆರಂಭಿಸಬೇಕು. ಅತಿ ಹೆಚ್ಚು ಮಳೆಯಾಗುವ ಕುರಿತಾದ ಮುನ್ಸೂಚನೆಗಳನ್ನು ಆಯಾ ಪ್ರದೇಶದ ಜನರಿಗೆ ಮೊದಲೇ ತಿಳಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಅಗ್ನಿಶಾಮಕ ದಳ, ಹೋಂಗಾರ್ಡ್ಗಳು ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ತಾಲೂಕುಗಳಿಗೆ ಈಗಾಗಲೇ ರಕ್ಷಣಾ ಬೋಟ್‌ಗಳನ್ನು ನೀಡಲಾಗಿದ್ದು ಅವುಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಬೇಕು. ಅತಿವೃಷ್ಟಿಯಿಂದ ಯಾವುದೇ ಸಣ್ಣ ಅನಾಹುತವಾಗದಂತೆ ಗರಿಷ್ಟ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಸಾಂಕ್ರಾಮಿಕ ರೋಗ ತಡೆ: ಮಳೆಗಾಲದಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಖಾತ್ರಿಪಡಿಸಬೇಕು. ಹಾವು ಕಡಿತದ ಇಂಜೆಕ್ಷನ್ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಎಲ್ಲಾ ವೈದ್ಯಾಧಿಕಾರಿಗಳು ಕಡ್ಡಾಯವಾಗಿ ಆಸ್ಪತ್ರೆಗಳಲ್ಲಿ ಲಭ್ಯವಿರಬೇಕು ಎಂದು ಹೇಳಿದರು.

ಗಾಳಿ ಮಳೆಯಿಂದಾಗಿ ಮರಗಳು ಬಿದ್ದ ಸಂದರ್ಭದಲ್ಲಿ ತಕ್ಷಣ ಅವುಗಳನ್ನು ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು. ರಸ್ತೆ ಸಂಪರ್ಕ ಕಡಿತವಾಗುವ ಸಂದರ್ಭದಲ್ಲಿ ಪರ್ಯಾಯ ಮಾರ್ಗಗಳನ್ನು ತಕ್ಷಣ ಕಲ್ಪಿಸಬೇಕು. ವಿದ್ಯುತ್ ಕಂಬಗಳು ಮತ್ತು ಟ್ರಾನ್ಸ್ಫಾರ್ಮರ್‌ಗಳು ಮುರಿದು ಬಿದ್ದಾಗ ತಕ್ಷಣ ಅವುಗಳನ್ನು ಬದಲಾಯಿಸಿ ವಿದ್ಯುತ್ ಸಂಪರ್ಕ ಪುನರಾರಂಭಿಸಲು ವ್ಯವಸ್ಥೆ ಮಾಡಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಡಿಸಿಗಳಿಗೆ ಸಿಎಂ ನೀಡಿದ ಸೂಚನೆಯೇನು?

ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಜಿಲ್ಲೆಗಳ ಡಿಸಿ, ಸಿಇಓಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು. ಅತಿವೃಷ್ಟಿಯಿಂದ ಅನಾಹುತ ಸಂಭವಿಸುವ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಜಿಲ್ಲೆಗಳ ಡಿಸಿ, ಸಿಇಓಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು. ಅತಿವೃಷ್ಟಿಯಿಂದ ಅನಾಹುತ ಸಂಭವಿಸುವ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಅನಾಹುತ ಸಂಭವಿಸಬಹುದಾದ ಶಾಲಾ ಕೊಠಡಿಗಳು, ಸೇತುವೆಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಬೇಕು. ಜಾನುವಾರು ಹಾನಿ ಮತ್ತು ಮಾನವ ಪ್ರಾಣ ಹಾನಿ ಸಂಭವಿಸಿದ ತಕ್ಷಣ ಸೂಕ್ತ ಪರಿಹಾರವನ್ನು ಒದಗಿಸಬೇಕು. ಪ್ರಕೃತಿ ವಿಕೋಪ ಕಾರ್ಯಗಳಿಗೆ ಸಾಕಷ್ಟು ಅನುದಾನ ಲಭ್ಯವಿದೆ ಎಂದು ಮುಖ್ಯಮಂತ್ರಿ ಅವರು ವಿಡಿಯೋ ಕಾನ್ಫರೆನ್ಸ್ನಲ್ಲಿ ಸೂಚನೆಗಳನ್ನು ಸಿಎಂ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *