ಸರ್ಕಾರಿ ಸಿಟಿ ಬಸ್ ಓಡಿಸಲು ಕೆ.ಎಸ್.ಆರ್.ಟಿ.ಸಿ. ನಿರ್ಲಕ್ಷ್ಯ : ಡಿಸಿ ಕಚೇರಿ ಎದುರು ಪ್ರತಿಭಟನೆ

ಶಿವಮೊಗ್ಗ, ಮೇ 26: ಶಿವಮೊಗ್ಗ ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳ ಸಂಚಾರ ಸಮರ್ಪಕವಾಗಿಲ್ಲ. ನಗರದ ಹೊರವಲಯದ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಬಸ್ ಗಳ ಸಂಚಾರವನ್ನು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಸ್ಥಗಿತಗೊಳಿಸಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಶೋಷಿತ ಸಮುದಾಯಗಳ ವೇದಿಕೆ ಆರೋಪಿಸಿದೆ. ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್.ಆರ್.ಟಿ.ಸಿ. ವಿರುದ್ದ ಸಂಘಟನೆ ಪ್ರತಿಭಟನೆ ನಡೆಸಿತು. ನಂತರ ಡಿಸಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಪತ್ರ ಅರ್ಪಿಸಿತು. ಸ್ಥಗಿತ: ಕೆ.ಎಸ್.ಆರ್.ಟಿ.ಸಿ. ಮುಖ್ಯ ಬಸ್ ನಿಲ್ದಾಣದಿಂದ ವಿನೋಬನಗರ ಮಾರ್ಗವಾಗಿ ಸೋಮಿನಕೊಪ್ಪ, ಕೋಟೆಗಂಗೂರು, ಸಿದ್ಲಿಪುರ, ಗೆಜ್ಜೇನಹಳ್ಳಿ, ವಿರುಪಿನಕೊಪ್ಪ ಸೇರಿದಂತೆ ವಿವಿಧ ಬಡಾವಣೆ ಹಾಗೂ ಗ್ರಾಮಗಳಿಗೆ ಸರ್ಕಾರಿ ಸಿಟಿ ಬಸ್ ಗಳನ್ನು ಓಡಿಸಲಾಗುತ್ತಿತ್ತು. ಇದರಿಂದ ಸಾವಿರಾರು ಜನರಿಗೆ ಅನುಕೂಲವಾಗಿತ್ತು.

ಶಿವಮೊಗ್ಗ, ಮೇ 26: ಶಿವಮೊಗ್ಗ ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳ ಸಂಚಾರ ಸಮರ್ಪಕವಾಗಿಲ್ಲ. ನಗರದ ಹೊರವಲಯದ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಬಸ್ ಗಳ ಸಂಚಾರವನ್ನು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಸ್ಥಗಿತಗೊಳಿಸಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಶೋಷಿತ ಸಮುದಾಯಗಳ ವೇದಿಕೆ ಆರೋಪಿಸಿದೆ.

ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್.ಆರ್.ಟಿ.ಸಿ. ವಿರುದ್ದ ಸಂಘಟನೆ ಪ್ರತಿಭಟನೆ ನಡೆಸಿತು. ನಂತರ ಡಿಸಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಪತ್ರ ಅರ್ಪಿಸಿತು.

ಸ್ಥಗಿತ: ಕೆ.ಎಸ್.ಆರ್.ಟಿ.ಸಿ. ಮುಖ್ಯ ಬಸ್ ನಿಲ್ದಾಣದಿಂದ ವಿನೋಬನಗರ ಮಾರ್ಗವಾಗಿ ಸೋಮಿನಕೊಪ್ಪ, ಕೋಟೆಗಂಗೂರು, ಸಿದ್ಲಿಪುರ, ಗೆಜ್ಜೇನಹಳ್ಳಿ, ವಿರುಪಿನಕೊಪ್ಪ ಸೇರಿದಂತೆ ವಿವಿಧ ಬಡಾವಣೆ ಹಾಗೂ ಗ್ರಾಮಗಳಿಗೆ ಸರ್ಕಾರಿ ಸಿಟಿ ಬಸ್ ಗಳನ್ನು ಓಡಿಸಲಾಗುತ್ತಿತ್ತು. ಇದರಿಂದ ಸಾವಿರಾರು ಜನರಿಗೆ ಅನುಕೂಲವಾಗಿತ್ತು.

ಆದರೆ ದಿಢೀರ್ ಆಗಿ ಕೆ.ಎಸ್.ಆರ್.ಟಿ.ಸಿ. ಸಂಸ್ಥೆ ಬಸ್ ಗಳ ಸಂಚಾರ ಸ್ಥಗಿತಗೊಳಿಸಿದೆ. ತಕ್ಷಣವೇ ಬಸ್ ಗಳ ಸಂಚಾರಕ್ಕೆ ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಂದು ಸಂಘಟನೆವತಿಯಿಂದ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಮಕ್ಬುಲ್ ಅಹಮದ್, ಜುಬೇರ್ ಅಹಮದ್, ಸಯ್ಯದ್ ಜಬೀರ್, ನಾಗರಾಜ್, ಸಿದ್ದಪ್ಪ, ದಿಲ್ ಶಾದ್, ಸಮೀನಾ, ದಾದಾ ಖಲಂದರ್, ಇರ್ಫಾನ್, ಶಫೀವುಲ್ಲಾ, ಮಹಮ್ಮದ್ ಅಲಿ, ಪುಷ್ಪಲತಾ ಸೇರಿದಂತೆ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *