ಸಿಎಂ ಆದೇಶದ ಎಫೆಕ್ಟ್ : ಮಳೆ ಹಾನಿ ತಡೆ ಕಾಮಗಾರಿ ಅನುಷ್ಠಾನಕ್ಕೆ ಅಡೆತಡೆ!

ಶಿವಮೊಗ್ಗ, ಜೂ. 2: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಳೆ ಹಾನಿ ತಡೆಗೆ ಅಗತ್ಯ ಕ್ರಮಕೈಗೊಳ್ಳುವಂತೆ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಇದೀಗ ಅವರೇ ಹೊರಡಿಸಿರುವ ಆದೇಶದಿಂದ, ಮಳೆ ಹಾನಿ ಸಂಬಂಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಅಡೆತಡೆಯಾಗಿ ಪರಿಣಮಿಸಿದೆ! ಹೌದು. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡಿದ್ದ ಎಲ್ಲ ಇಲಾಖೆ ಹಾಗೂ ನಿಗಮ-ಮಂಡಳಿ, ಪ್ರಾಧಿಕಾರಿಗಳ ಕಾಮಗಾರಿಗಳಿಗೆ ಸಂಬಂಧಿಸಿದ ಹಣ ಬಿಡುಗಡೆ / ಪಾವತಿ ತಡೆಹಿಡಿಯುವಂತೆ ಮತ್ತು ಪ್ರಾರಂಭವಾಗದಿರುವ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದರು.

*ಅನುದಾನ ಬಿಡುಗೆಡಯಾದರೂ ಆರಂಭವಾಗದ ಶಿವಮೊಗ್ಗ ತಾಲೂಕು ಬಸವನಗಂಗೂರು ಕೆರೆ ನಾಲೆ ನಿರ್ಮಾಣ ಕೆಲಸ..!!

ವರದಿ : ಬಿ. ರೇಣುಕೇಶ್

ಶಿವಮೊಗ್ಗ, ಜೂ. 2: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಳೆ ಹಾನಿ ತಡೆಗೆ ಅಗತ್ಯ ಕ್ರಮಕೈಗೊಳ್ಳುವಂತೆ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಇದೀಗ ಅವರೇ ಹೊರಡಿಸಿರುವ ಆದೇಶದಿಂದ, ಮಳೆ ಹಾನಿ ಸಂಬಂಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಅಡೆತಡೆಯಾಗಿ ಪರಿಣಮಿಸಿದೆ!

ಹೌದು. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡಿದ್ದ ಎಲ್ಲ ಇಲಾಖೆ ಹಾಗೂ ನಿಗಮ-ಮಂಡಳಿ, ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದ ಹಣ ಬಿಡುಗಡೆ / ಪಾವತಿ ತಡೆಹಿಡಿಯುವಂತೆ ಮತ್ತು ಪ್ರಾರಂಭವಾಗದಿರುವ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದರು.

ಇದರ ನೇರ ಪರಿಣಾಮ, ಪ್ರತಿ ಮಳೆಗಾಲದ ವೇಳೆ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಸೃಷ್ಟಿಸುವ ಶಿವಮೊಗ್ಗ ತಾಲೂಕು ಬಸವನಗಂಗೂರು ಕೆರೆ ನಾಲೆ ಅಭಿವೃದ್ದಿ ಕಾಮಗಾರಿ ಮೇಲೆ ಬೀರುವಂತಾಗಿದೆ!

ಬಸವನಗಂಗೂರು ಕೆರೆಯ ಕೋಡಿ ನೀರು ಹರಿದು ಹೋಗುವ ಕಾಲುವೆ ಭಾರೀ ಪ್ರಮಾಣದಲ್ಲಿ ಒತ್ತುವರಿಯಾಗಿದೆ. ಕೆರೆಯ ಎರಡೂ ಬದಿ ಕಾಲುವೆಯೇ ಕಣ್ಮರೆಯಾಗಿದೆ. ಇದರಿಂದ ಕೆರೆ ಭರ್ತಿಯಾದ ವೇಳೆ, ತಗ್ಗು ಪ್ರದೇಶದಲ್ಲಿರುವ ಜನವಸತಿ ಪ್ರದೇಶಗಳಿಗೆ ಕೋಡಿ ನೀರು ನುಗ್ಗುತ್ತಿದೆ. ಇದರಿಂದ ನಾಗರೀಕರು ತೀವ್ರ ತೊಂದರೆ ಎದುರಿಸುವಂತಾಗಿದೆ.

ಹಣ ಬಿಡುಗಡೆ: ಸರಾಗವಾಗಿ ಕೆರೆ ನೀರು ಹರಿದು ಹೋಗುವಂತೆ ಮಾಡುವ ಮೂಲಕ, ನಾಗರೀಕರಿಗೆ ಆಗುತ್ತಿರುವ ಅನಾನುಕೂಲ ತಪ್ಪಿಸಲು ಕಳೆದ ವರ್ಷ 50 ಲಕ್ಷ ರೂ. ಮಂಜೂರಾಗಿತ್ತು. ಕಾಮಗಾರಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಬೇಸಿಗೆ ಅವಧಿಯಲ್ಲಿ ಕಾಮಗಾರಿ ನಡೆಸುವುದಾಗಿ ಸಣ್ಣ ನೀರಾವರಿ ಇಲಾಖೆ ತಿಳಿಸಿತ್ತಾದರೂ ಕೆಲಸ ಆರಂಭವಾಗಿರಲಿಲ್ಲ.

ಸಿಎಂ ಆದೇಶ: ಈ ನಡುವೆ ಮುಖ್ಯಮಂತ್ರಿಗಳು ಹೊರಡಿಸಿರುವ ಆದೇಶ ಮುಂದಿಟ್ಟುಕೊಂಡು, ಸಣ್ಣ ನೀರಾವರಿ ಇಲಾಖೆ ಕಾಮಗಾರಿ ಆರಂಭಕ್ಕೆ ಮೀನಮೇಷ ಎಣಿಸುತ್ತಿದೆ. ಸಂಬಂಧಿಸಿದ ಇಲಾಖೆ ಸಚಿವರು, ಹಿರಿಯ ಅಧಿಕಾರಿಗಳ ಅನುಮತಿ ದೊರಕಿದ ನಂತರ ಕಾಮಗಾರಿ ಆರಂಭಿಸುವುದಾಗಿ ಹೇಳಲಾರಂಭಿಸಿದೆ.

ಇದರಿಂದ ಪ್ರಸ್ತುತ ಮಳೆಗಾಲದ ವೇಳೆ ಬಸವನಗಂಗೂರು ಕೆರೆ ಭರ್ತಿಯಾದರೇ, ಮತ್ತೆ ತಗ್ಗು ಪ್ರದೇಶದಲ್ಲಿರುವ ಜನವಸತಿ ಪ್ರದೇಶಗಳು ಜಲಾವೃತವಾಗುತ್ತವೆ. ಇದರಿಂದ ನಾಗರೀಕರು ತೀವ್ರ ತೊಂದರೆ ಎದುರಿಸುವಂತಾಗುತ್ತದೆ.

ಈ ಹಿನ್ನಲೆಯಲ್ಲಿ ತಕ್ಷಣವೇ ಮುಖ್ಯಮಂತ್ರಿಗಳು, ಇಲಾಖೆ ಸಚಿವರು, ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಇತ್ತ ಚಿತ್ತ ಹರಿಸಬೇಕಾಗಿದೆ. ಕಾಲಮಿತಿಯೊಳಗೆ ಕಾಮಗಾರಿ ಅನುಷ್ಠಾನಕ್ಕೆ ಆದ್ಯ ಗಮನಹರಿಸಬೇಕಾಗಿದೆ. ಈ ಮೂಲಕ ನಾಗರೀಕರಿಗೆ ಅನುಕೂಲ ಕಲ್ಪಿಸಿಕೊಡಬೇಕಾಗಿದೆ ಎಂದು ಕೆರೆ ನೀರಿನಿಂದ ಜಲಾವೃತ ಸಮಸ್ಯೆ ಎದುರಿಸುತ್ತಿರುವ ತಗ್ಗು ಪ್ರದೇಶದ ನಾಗರೀಕರು ಆಗ್ರಹಿಸುತ್ತಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *