ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದ ವರ್ತನೆ : 22 ಜನರು ಪೊಲೀಸ್ ವಶಕ್ಕೆ

ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಗಳಲ್ಲಿ, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ 22 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜೂ. 1 ರ ರಾತ್ರಿ ನಡೆದಿದೆ. ಠಾಣಾ ವ್ಯಾಪ್ತಿಯ ಕಾಶೀಪುರ, ಆಲ್ಕೋಳ, ಗಾಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಶಿವಮೊಗ್ಗ, ಜೂ. 2: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಗಳಲ್ಲಿ, ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಾಗೂ ಅಸಭ್ಯ ವರ್ತನೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ, 22 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜೂ. 1 ರ ರಾತ್ರಿ ನಡೆದಿದೆ.

ಠಾಣಾ ವ್ಯಾಪ್ತಿಯ ಕಾಶೀಪುರ, ಆಲ್ಕೋಳ, ಗಾಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ನಡೆಸಿದ ವಿಶೇಷ ಗಸ್ತು ಕಾರ್ಯಾಚರಣೆ ವೇಳೆ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದವರನ್ನು ವಶಕ್ಕೆ ಪಡೆಯಲಾಗಿದೆ.

ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದ ವರ್ತನೆ : 22 ಜನರು ಪೊಲೀಸ್ ವಶಕ್ಕೆ

ವಶಕ್ಕೆ ಪಡೆದವರನ್ನು ಠಾಣೆಗೆ ಕರೆತಂದು ಅವರ ಪೂರ್ವಾಪರಗಳನ್ನು ಸಂಗ್ರಹಿಸಿದ್ದಾರೆ. 22 ಲಘು ಪ್ರಕರಣ ದಾಖಲಿಸಿಕೊಂಡು ಬಿಡುಗಡೆ ಮಾಡಿದ್ದಾರೆ.

ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ವಿನೋಬನಗರ ಠಾಣೆ ಇನ್ಸ್’ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್, ಸಬ್ ಇನ್ಸ್’ಪೆಕ್ಟರ್ ಸುನೀಲ್ ಮತ್ತವರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *