ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ : ಯಾವುದೇ ನಿಷೇಧಿತ ವಸ್ತುಗಳು ಸಿಕ್ಕಿಲ್ಲ : ಜೈಲ್ ಅಧೀಕ್ಷಕರ ಮಾಹಿತಿ

ಶಿವಮೊಗ್ಗ ನಗರದ ಹೊರವಲಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ, ಇತ್ತೀಚೆಗಷ್ಟೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಜೈಲ್ ನ ಮಹಿಳಾ ಬಂಧೀಖಾನೆಯಲ್ಲಿ ಶನಿವಾರ ಪೊಲೀಸರು ತಪಾಸಣೆ ನಡೆಸಿದ ಘಟನೆ ನಡೆದಿದೆ. ಐಪಿಎಸ್ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ತಪಾಸಣಾ ಕಾರ್ಯ ನಡೆದಿದೆ. ಕಾರಾಗೃಹದಲ್ಲಿನ ಪ್ರತಿಯೊಂದು ಬ್ಯಾರಕ್ ನ್ನು ತಂಡ ಶೋಧ ನಡೆಸಿದೆ. ಈ ವೇಳೆ ಪೊಲೀಸರಿಗೆ ಯಾವುದೇ ನಿಷೇಧಿತ ವಸ್ತುಗಳು ದೊರಕಿಲ್ಲ ಎಂದು ಮಹಿಳಾ ಕೇಂದ್ರ ಕಾರಾಗೃಹದ ಅಧೀಕ್ಷಕಿ ಹೇಮಾವತಿ ಜಿ ಅವರು ತಿಳಿಸಿದ್ದಾರೆ.

ಶಿವಮೊಗ್ಗ, ಜೂ. 3: ಶಿವಮೊಗ್ಗ ನಗರದ ಹೊರವಲಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ, ಇತ್ತೀಚೆಗಷ್ಟೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಜೈಲ್ ನ ಮಹಿಳಾ ಬಂಧೀಖಾನೆಯಲ್ಲಿ ಶನಿವಾರ ಪೊಲೀಸರು ತಪಾಸಣೆ ನಡೆಸಿದ ಘಟನೆ ನಡೆದಿದೆ.

ಶಿವಮೊಗ್ಗ, ಜೂ. 3: ಶಿವಮೊಗ್ಗ ನಗರದ ಹೊರವಲಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ, ಇತ್ತೀಚೆಗಷ್ಟೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಜೈಲ್ ನ ಮಹಿಳಾ ಬಂಧೀಖಾನೆಯಲ್ಲಿ ಶನಿವಾರ ಪೊಲೀಸರು ತಪಾಸಣೆ ನಡೆಸಿದ ಘಟನೆ ನಡೆದಿದೆ.

ಐಪಿಎಸ್ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ತಪಾಸಣಾ ಕಾರ್ಯ ನಡೆದಿದೆ. ಕಾರಾಗೃಹದಲ್ಲಿನ ಪ್ರತಿಯೊಂದು ಬ್ಯಾರಕ್ ನ್ನು ತಂಡ ಶೋಧ ನಡೆಸಿದೆ. ಈ ವೇಳೆ ಪೊಲೀಸರಿಗೆ ಯಾವುದೇ ನಿಷೇಧಿತ ವಸ್ತುಗಳು ದೊರಕಿಲ್ಲ ಎಂದು ಮಹಿಳಾ ಕೇಂದ್ರ ಕಾರಾಗೃಹದ ಅಧೀಕ್ಷಕಿ ಹೇಮಾವತಿ ಜಿ ಅವರು ತಿಳಿಸಿದ್ದಾರೆ.

ತಪಾಸಣಾ ತಂಡದಲ್ಲಿ ಓರ್ವ ಮಹಿಳಾ ಹೆಡ್ ಕಾನ್ಸ್’ಟೇಬಲ್, 8 ಕಾನ್ಸ್’ಟೇಬಲ್, 5 ಪುರುಷ ಕಾನ್ಸ್’ಟೇಬಲ್, ಶ್ವಾನ ದಳ ಭಾಗಿಯಾಗಿತ್ತು. ಇದೇ ವೇಳೆ ತಪಾಸಣಾ ಯಂತ್ರದ ಮೂಲಕವೂ ಶೋಧ ನಡೆಸಲಾಗಿದೆ ಎಂದು ಕಾರಾಗೃಹದ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ, ಜೂ. 3: ಶಿವಮೊಗ್ಗ ನಗರದ ಹೊರವಲಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ, ಇತ್ತೀಚೆಗಷ್ಟೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಜೈಲ್ ನ ಮಹಿಳಾ ಬಂಧೀಖಾನೆಯಲ್ಲಿ ಶನಿವಾರ ಪೊಲೀಸರು ತಪಾಸಣೆ ನಡೆಸಿದ ಘಟನೆ ನಡೆದಿದೆ.

ಕುತೂಹಲ ಮೂಡಿಸಿದ ಜೈಲ್ ಅಧೀಕ್ಷಕರ ಪ್ರಕಟಣೆ..!

ಮಹಿಳಾ ಬಂಧೀಖಾನೆಯಲ್ಲಿ ಶ್ವಾನ ದಳ, ತಪಾಸಣಾ ಯಂತ್ರಗಳೊಂದಿಗೆ ಪೊಲೀಸರು ತಪಾಸಣೆ ನಡೆಸಿದ್ದು ಹಾಗೂ ಈ ಕುರಿತಂತೆ ಕಾರಾಗೃಹ ಅಧೀಕ್ಷಕರು ಪತ್ರಿಕಾ ಪ್ರಕಟಣೆ ನೀಡಿರುವುದು ಕುತೂಹಲ ಹಾಗೂ ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಸರ್ವೇಸಾಮಾನ್ಯವಾಗಿ ಕಾರಾಗೃಹದಲ್ಲಿ ಪೊಲೀಸರು ನಡೆಸುವ ತಪಾಸಣೆ ಕುರಿತಂತೆ, ಜೈಲ್ ಅಧೀಕ್ಷಕರು ಪ್ರಕಟಣೆ ನೀಡುವುದಿಲ್ಲ. ಪೊಲೀಸ್ ಇಲಾಖೆಯೇ ಪತ್ರಿಕಾ ಪ್ರಕಟಣೆ ನೀಡುತ್ತದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *