ಶಿವಮೊಗ್ಗ ಜಿಲ್ಲಾ ವಾರ್ತಾ – ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ಧೀನ್ ವರ್ಗಾವಣೆ

ಶಿವಮೊಗ್ಗ, ಜೂ. 5: ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ದೀನ್ ಅವರನ್ನು, ಬೆಂಗಳೂರಿನ ವಾರ್ತಾ ಇಲಾಖೆಯ ಕೇಂದ್ರ ಕಚೇರಿಗೆ ವರ್ಗಾವಣೆಗೊಳಿಸಲಾಗಿದೆ. ಶಫಿ ಸಾದುದ್ದೀನ್ ಅವರು ಕಳೆದ 6 ವರ್ಷಗಳಿಂದ ಶಿವಮೊಗ್ಗದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಸರಳ, ಸಜ್ಜನ, ಪ್ರಾಮಾಣಿಕ ವ್ಯಕ್ತಿತ್ವದವರಾಗಿದ್ದರು. ಯಾವುದೇ ಗೊಂದಲ, ಗಡಿಬಿಡಿಗೆ ಆಸ್ಪದವಾಗದಂತೆ ತಮ್ಮ ಕರ್ತವ್ಯ ನಿರ್ವಹಣೆ ಮಾಡಿಕೊಂಡು ಬಂದಿದ್ದರು.

ಶಿವಮೊಗ್ಗ, ಜೂ. 5: ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ದೀನ್ ಅವರನ್ನು, ವಾರ್ತಾ ಇಲಾಖೆಯ ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆಗೊಳಿಸಲಾಗಿದೆ.

ಶಫಿ ಸಾದುದ್ದೀನ್ ಅವರು ಕಳೆದ 6 ವರ್ಷಗಳಿಂದ ಶಿವಮೊಗ್ಗದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಸರಳ, ಸಜ್ಜನ, ಪ್ರಾಮಾಣಿಕ ವ್ಯಕ್ತಿತ್ವದವರಾಗಿದ್ದರು. ಯಾವುದೇ ಗೊಂದಲ, ಗಡಿಬಿಡಿಗೆ ಆಸ್ಪದವಾಗದಂತೆ ತಮ್ಮ ಕರ್ತವ್ಯ ನಿರ್ವಹಣೆ ಮಾಡಿಕೊಂಡು ಬಂದಿದ್ದರು.

ಸರ್ಕಾರಿ ಕಾರ್ಯಕ್ರಮ – ಸಭೆಗಳ ಕುರಿತಂತೆ ಮಾಧ್ಯಮಗಳಿಗೆ ಅವರು ಕಳುಹಿಸುತ್ತಿದ್ದ ವರದಿಗಳ ನಿರೂಪಣಾ ಶೈಲಿಯು ಪತ್ರಕರ್ತ ವಲಯದ ಮೆಚ್ಚುಗೆಗೆ ಪಾತ್ರವಾಗಿತ್ತು.

ಶಫಿ ಸಾದುದ್ದೀನ್ ಅವರ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಇನ್ನಷ್ಟೆ ವಾರ್ತಾಧಿಕಾರಿಗಳ ನಿಯೋಜನೆಯಾಗಬೇಕಾಗಿದೆ. ಕಚೇರಿಯ ಸಹಾಯಕ ವಾರ್ತಾಧಿಕಾರಿ ಮಾರುತಿ ಅವರಿಗೆ ಪ್ರಭಾರ ವಾರ್ತಾಧಿಕಾರಿ ಜವಾಬ್ದಾರಿ ವಹಿಸಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →