ಬಾರ್ ಕ್ಯಾಷಿಯರ್ ಹತ್ಯೆ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು..!

*ಕ್ರಿಮಿನಲ್ಸ್ ಗಳಿಗೆ ಪೊಲೀಸರ ಖಡಕ್ ವಾರ್ನಿಂಗ್!

*ಪೊಲೀಸರ ಎದುರಿನಲ್ಲಿಯೇ ಚೂರಿಯಿಂದ ದಾಳಿ ನಡೆಸಿದ್ದ ಹಂತಕರು!!

ಶಿವಮೊಗ್ಗ, ಜೂ. 5: ಶಿವಮೊಗ್ಗ ತಾಲೂಕು ಆಯನೂರು ಬಾರ್ ಕ್ಯಾಷಿಯರ್ ನನ್ನು ಪೊಲೀಸರ ಸಮ್ಮುಖದಲ್ಲಿಯೇ ಹತ್ಯೆ ನಡೆಸಿ ಪರಾರಿಯಾಗಿದ್ದ ಆರೋಪಿಗಳಲ್ಲಿ, ಓರ್ವನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸೋಮವಾರ ನಡೆದಿದೆ.

ಸತೀಶ್ ಗುಂಡೇಟಿಗೆ ತುತ್ತಾದ ಆರೋಪಿ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಹತ್ಯೆ ನಡೆಸಿದ ನಂತರ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನಕ್ಕೆ ಪೊಲೀಸರು ತೆರೆಳಿದ್ದ ವೇಳೆ, ಆಪಾದಿತ ಸತೀಶ್ ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿ ನಡೆಸಲು ಮುಂದಾಗಿದ್ದ. ಈ ವೇಳೆ ಆತ್ಮ ರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡಿಕ್ಕಿ ವಶಕ್ಕೆ ಪಡೆದಿದ್ದಾರೆ.

ಹತ್ಯೆ: ಆಯನೂರು ತಾಂಡಾದ ಮೂವರು ಆರೋಪಿಗಳು ಆಯನೂರಿನ ನವರತ್ನ ಬಾರ್  ನಲ್ಲಿ ಕ್ಯಾಷಿಯರ್ ಸಚಿನ್ ಎಂಬ ಯುವಕನನ್ನು ಪೊಲೀಸರ ಸಮ್ಮುಖದಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ನಂತರ ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →