ಮನೆಯಲ್ಲಿಯೇ ಹೂವಿನ ಪಾಟ್ ಗಳಲ್ಲಿ ಗಾಂಜಾ ಗಿಡ ಬೆಳೆದಿದ್ದವ ಸೇರಿದಂತೆ ಮೂವರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಅರೆಸ್ಟ್!

ಮನೆಯಲ್ಲಿಯೇ ಹೂವಿನ ಪಾಟ್ ಗಳಲ್ಲಿ ಗಾಂಜಾ ಗಿಡ ಬೆಳೆದಿದ್ದವ ಸೇರಿದಂತೆ ಮೂವರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಅರೆಸ್ಟ್!

ಶಿವಮೊಗ್ಗ, ಜೂ. 24: ಬಾಡಿಗೆಗಿದ್ದ ಮನೆಯೊಂದರ ಕೋಣೆಯಲ್ಲಿ, ಅತ್ಯಂತ ಗುಪ್ತವಾಗಿ ಹೂವಿನ ಪಾಟ್ ಗಳಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಸೇರಿದಂತೆ, ಮೂವರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ತಮಿಳುನಾಡು ರಾಜ್ಯದ ಕೃಷ್ಣಗಿರಿಯ ಜಕ್ಕಪ್ಪನಗರ ನಿವಾಸಿ ವಿಘ್ನರಾಜ್ (28), ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಅಡಿಮಲಿ ಟೌನ್ ನಿವಾಸಿ ವಿನೋದ್ ಕುಮಾರ್ (27) ಹಾಗೂ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಕಡಗತ್ತೂರು ನಿವಾಸಿ ಪಾಂಡಿ ದೊರೈ (27) ಬಂಧಿತ ಆರೋಪಿಗಳಾಗಿದ್ದಾರೆ.

ಶಿವಮೊಗ್ಗ, ಜೂ. 24: ಬಾಡಿಗೆಗಿದ್ದ ಮನೆಯೊಂದರ ಕೋಣೆಯಲ್ಲಿ, ಅತ್ಯಂತ ಗುಪ್ತವಾಗಿ ಹೂವಿನ ಪಾಟ್ ಗಳಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಸೇರಿದಂತೆ, ಮೂವರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಇವರೆಲ್ಲರು ಖಾಸಗಿ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳಾಗಿದ್ದಾರೆ. ಇದರಲ್ಲಿ ವಿಘ್ನರಾಜ್ ಗಾಂಜಾ ಗಿಡ ಬೆಳೆದ ಆರೋಪಿಯಾಗಿದ್ದಾನೆ. ಈತ ಸುಬ್ಬಯ್ಯ ಮೆಡಿಕಲ್ ಕಾಲೇಜ್ ಸಮೀಪದ ಶಿವಗಂಗಾ ಲೇಔಟ್ ನಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ.

ವಿಘ್ನರಾಜ್ ನು ಗಾಂಜಾ ಗಿಡಗಳನ್ನು ಬೆಳೆದು ಒಣಗಿಸಿ, ಸಣ್ಣ ಸಣ್ಣ ಪ್ಯಾಕೆಟ್ ಗಳಲ್ಲಿ ತುಂಬಿ ಮಾರಾಟ ಮಾಡುತ್ತಿದ್ದ. ಉಳಿದಿಬ್ಬರು ಆರೋಪಿಗಳಾದ ವಿನೋದ್ ಕುಮಾರ್ ಹಾಗೂ ಪಾಂಡಿ ಗಾಂಜಾ ಖರೀದಿಗೆಂದು ಬಂದವರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳಿಂದ 227 ಗ್ರಾಂ ತೂಕದ ಒಣ ಗಾಂಜಾ, 1 ಕೆಜಿ 530 ಗ್ರಾಂ ತೂಕದ ಹಸಿ ಗಾಂಜಾ, 10 ಗ್ರಾಂ ಚರಸ್, ಗಾಂಜಾ ಬೀಜಗಳಿದ್ದ 1 ಚಿಕ್ಕ ಬಾಟಲ್, 3 ಕೆನಾಬಿಸ್ ಆಯಿಲ್ ಸೀರಂಜ್ ರೀತಿಯ ವಸ್ತುಗಳು, 3 ಕಬ್ಬಿಣದ ರಾಡ್ ಗಳ ಮೇಲೆ ಕಪ್ಪು ಬಣ್ಣದ ಕವರ್ ಸುತ್ತಿದ್ದ ಸ್ಯಾಂಡ್ ಗಳು,

ಗಾಂಜಾ ಪುಡಿ ಮಾಡಲು ಬಳಸುವ 2 ಡಬ್ಬಿಗಳು, 1 ಎಲೆಕ್ಟ್ರಾನಿಕ್ ತೂಕದ ಯಂತ್ರ, 1 ಎಕ್ಸಿಟ್ ಫ್ಯಾನ್, 6 ಟೇಬಲ್ ಫ್ಯಾನ್ ಗಳು, 2 ಸೆಸರ್ ಗಳು, 3 ಎಲ್.ಇ.ಡಿ. ಲೈಟ್ ಗಳು, ರೋಲಿಂಗ್ ಪೇಪರ್, 2 ಹುಕ್ಕಾ ಕೊಳವೆ, 4 ಹುಕ್ಕಾ ಕ್ಯಾಪ್ ಗಳು, ಗಾಂಜಾ ಗಿಡದ ಕಾಂಡಗಳು, 19 ಸಾವಿರ ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜೂ. 23 ರಂದು ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಮೂವರು ಆರೋಪಿಗಳ ವಿರುದ್ದ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಸುರೇಶ್ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ್, ಸಬ್ ಇನ್ಸ್’ಪೆಕ್ಟರ್ ರಮೇಶ್ ಟಿ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಗಾಂಜಾ ಗಿಡ ಬೆಳೆಯಲು ಹೈಟೆಕ್ ವ್ಯವಸ್ಥೆ!

*** ಆರೋಪಿ ವಿಘ್ನರಾಜ್ ತಂಗಿದ್ದ ಮನೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ಇದಕ್ಕಾಗಿ ಮನೆಯ ಕೊಠಡಿಯೊಂದನ್ನು ಹೈಟೆಕ್ ಆಗಿ ಪರಿವರ್ತಿಸಲಾಗಿತ್ತು! ಸ್ಪೈಡರ್ ಫಾರ್ಮರ್ ಹೆಸರಿನ ಬೋರ್ಡ್ ಕೂಡ ಆರೋಪಿ ಹಾಕಿದ್ದ. ಕೊಠಡಿಯೊಳಗೆ ಪ್ರತ್ಯೇಕ ಟೆಂಟ್ ಹಾಕಲಾಗಿತ್ತು. ಅದರೊಳಗೆ ಹೊರಗಿನಿಂದ ಗಾಳಿ-ಬೆಳಕು ಬರದಂತೆ ವ್ಯವಸ್ಥೆ ಮಾಡಲಾಗಿತ್ತು.

ಟೇಬಲ್ ಫ್ಯಾನ್ ಹಾಕಲಾಗಿತ್ತು. ಅದರ ಗಾಳಿ ಎಕ್ಸಿಟ್ ಫ್ಯಾನ್ ಮೂಲಕ ಹೊರ ಹೋಗುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಹಾಗೂ ಸೂರ್ಯನ ಬೆಳಕಿನ ರೀತಿಯಲ್ಲಿ ಎಲ್.ಇ.ಡಿ. ಲೈಟ್ ಪ್ಲೇಟ್ ಗಳನ್ನು ಅಳವಡಿಸಲಾಗಿತ್ತು. ತಾಪಮಾನ ನಿಯಂತ್ರಣ ವ್ಯವಸ್ಥೆ ರೂಪಿಸಿ, ಹೂವಿನ ಕುಂಡಗಳಲ್ಲಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ಇದು ಸ್ವತಃ ಪೊಲೀಸರನ್ನೇ ಹುಬ್ಬೇರುವಂತೆ ಮಾಡಿದೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಪ್ರಶಂಸೆ

*** ಅತ್ಯಂತ ಗುಪ್ತವಾಗಿ ಮನೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆಯುತ್ತಿದ್ದ ಪ್ರಕರಣ ಪತ್ತೆ ಹಚ್ಚುವಲ್ಲಿ ಸಫಲವಾದ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿ – ಸಿಬ್ಬಂದಿಗಳನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಶ್ಲಾಘಿಸಿದ್ದಾರೆ. ಶನಿವಾರ ಶಿವಮೊಗ್ಗ ನಗರದ ಡಿಎಆರ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ ಎಸ್ಪಿಅವರು, ಪ್ರಕರಣದ ಕುರಿತಂತೆ ಮಾಹಿತಿ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *